ಡಾರ್ವಿನ್ ಸಿದ್ಧಾಂತವನ್ನು ಪಠ್ಯದಿಂದ ತೆಗೆಯುವ ಉದ್ದೇಶವಿಲ್ಲ: ಮಾನವ ಸಂಪನ್ಮೂಲ ಇಲಾಖೆ
ಚಾರ್ಲ್ಸ್ ಡಾರ್ವಿನ್ ನ ವಿಕಾಸ ಸಿದ್ಧಾಂತವನ್ನು ಪಠ್ಯದಿಂದ ತೆಗೆಯುವ ಉದ್ದೇಶವಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹೇಳಿದೆ.
ನವದೆಹಲಿ: ಚಾರ್ಲ್ಸ್ ಡಾರ್ವಿನ್ ನ ವಿಕಾಸ ಸಿದ್ಧಾಂತವನ್ನು ಪಠ್ಯದಿಂದ ತೆಗೆಯುವ ಉದ್ದೇಶವಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹೇಳಿದೆ.
ಡಾರ್ವಿನ್ ನ ವಿಕಾಸ ಸಿದ್ಧಾಂತ 12 ನೇ ತರಗತಿಯ ವಿದ್ಯಾರ್ಥಿಗಳ ಪಠ್ಯದ ಭಾಗವಾಗಿದೆ ಎಂದು ಹೆಚ್ ಆರ್ ಡಿ ಖಾತೆ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮಾನವ ಸಂಪನ್ಮೂಲ ಇಲಾಖೆಗೆ ಡಾರ್ವಿನ್ ನ ವಿಕಾಸವಾದದ ಸಿದ್ಧಾಂತವನ್ನು ಪಠ್ಯದಿಂದ ತೆಗೆದುಹಾಕಬೇಕೆಂಬ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.