ರಾಹುಲ್ ಗಾಂಧಿ 
ದೇಶ

2019 ರಲ್ಲಿ ರಾಹುಲ್ ಗಾಂಧಿ ಮಾತ್ರ ಬಿಜೆಪಿ, ಮೋದಿಯನ್ನು ಎದುರಿಸಬಲ್ಲರು: ಕಾಂಗ್ರೆಸ್

2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಎದುರಿಸಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯಿಂದ ಮಾತ್ರ ಸಾಧ್ಯ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

ನವದೆಹಲಿ: ರಾಹುಲ್ ಗಾಂಧಿ ಅವರ ವರ್ಚಸ್ಸನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕಾಂಗ್ರೆಸ್ ಪಕ್ಷ ಈಗ 2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಎದುರಿಸಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯಿಂದ ಮಾತ್ರ ಸಾಧ್ಯ ಎಂದು ಹೇಳಿದೆ. 
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ರಾಹುಲ್ ಗಾಂಧಿ ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರಿಸದೇ ಬಿಜೆಪಿ ಪಲಾಯನ ಮಾಡುತ್ತಿದೆ. ಸರ್ಕಾರದ ವೈಫಲ್ಯಗಳ ಬಗ್ಗೆ ರಾಹುಲ್ ಗಾಂಧಿ ನಿರಂತರವಾಗಿ ಪ್ರಶ್ನೆ ಮಾಡುತ್ತಿರುವುದು ಪ್ರತಿಪಕ್ಷಗಳಿಗೂ ಬಲ ಬಂದಂತಾಗಿದೆ ಎಂದು ಕಾಂಗ್ರೆಸ್ ನಾಯಕ, ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷಸಚಿನ್ ಪೈಲಟ್ ಹೇಳಿದ್ದಾರೆ. 
2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ, ಬಿಜೆಪಿಯನ್ನು ಎದುರಿಸುವ ವ್ಯಕ್ತಿ ಇದ್ದರೆ ಅದು ರಾಹುಲ್ ಗಾಂಧಿ ಮಾತ್ರ, ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜಸ್ಥಾನದ ಉಪಚುನಾವಣೆಯನ್ನೂ ಗೆದ್ದಿದ್ದೇವೆ ಎಂದು ಸಚಿನ್ ಪೈಲಟ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ