ರಜನಿ - ಕಮಲ್ ಹಾಸನ್ 
ದೇಶ

ರಜನಿ ಮತ್ತು ನಾನು ಮೈತ್ರಿ ಮಾಡಿಕೊಳ್ಳುವುದಾದರೆ ಆಲೋಚನೆ ಮಾಡಬೇಕಿದೆ: ಕಮಲ್ ಹಾಸನ್

ಒಂದು ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ನಾನು ಒಟ್ಟಾಗಿ ಚುನಾವಣೆ ಎದುರಿಸುವ ಅಗತ್ಯಬಿದ್ದರೆ ಆ ಬಗ್ಗೆ ಆಲೋಚನೆ ಮಾಡಬೇಕಾಗುತ್ತದೆ...

ಚೆನ್ನೈ: ಒಂದು ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ನಾನು ಒಟ್ಟಾಗಿ ಚುನಾವಣೆ ಎದುರಿಸುವ ಅಗತ್ಯಬಿದ್ದರೆ ಆ ಬಗ್ಗೆ ಆಲೋಚನೆ ಮಾಡಬೇಕಾಗುತ್ತದೆ ಎಂದು ಇತ್ತೀಚಿಗಷ್ಟೇ ರಾಜಕೀಯ ಪ್ರವೇಶಿಸಿರುವ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರು ಗುರುವಾರ ಹೇಳಿದ್ದಾರೆ.
ಇಬ್ಬರು ಹಿರಿಯ ನಟರು ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತು ಪದೇಪದೆ ಕೇಳಿ ಬರುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ರಜನಿಕಾಂತ್ ಅವರ ದೃಷ್ಟಿಕೋನವನ್ನು ಒಪ್ಪಿಕೊಳ್ಳುತ್ತೇನೆ ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
ರಜನಿ ಸರ್ ಮತ್ತು ನನ್ನ ಮೈತ್ರಿಗೆ ಸಮಯವೇ ಉತ್ತರ ನೀಡಲಿದೆ ಎಂದು ಕಮಲ್ ಹಾಸನ್ ಅವರು ತಮಿಳು ನಿಯತಕಾಲಿಕೆ ಆನಂದ ವಿಕಟನ್ ನಲ್ಲಿನ ತಮ್ಮ ಅಂಕಣದಲ್ಲಿ ಹೇಳಿಕೊಂಡಿದ್ದಾರೆ.
ನಟ ಕಮಲ್ ಹಾಸನ್ ಅವರು ತಮ್ಮ ರಾಜಕೀಯ ಪಕ್ಷದ ಹೆಸರನ್ನು ಫೆಬ್ರವರಿ 21ರಂದು ಘೋಷಣೆ ಮಾಡಲಿದ್ದು, ಪಕ್ಷದ ಸಿದ್ಧಾಂತ, ಗುರಿಗಳೇನು ಎಂಬುದನ್ನೂ ಅವರು ಇದೇ ಸಂದರ್ಭದಲ್ಲಿ ಬಹಿರಂಗ ಪಡಿಸಲಿದ್ದಾರೆ. ಅಲ್ಲದೆ ಫೆಬ್ರವರಿ 21 ರಿಂದ ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್