ನವದೆಹಲಿ: ಪಾಕಿಸ್ತಾನಿ ಭಯೋತ್ಪಾದಕ ಜೈಲಿನಿಂದ ಪರಾರಿಯಾಗಿರವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಕಾರಾಗೃಹಗಲ ಭದ್ರತೆಯನ್ನು ಪರಿಶೀಲನೆ ನಡೆಸುವಂತೆ ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಈ ರೀತಿಯ ಘಟನೆಗಳು ಇನ್ನು ಮುಂದೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಹೇಳಿದೆ. ಪಾಕಿಸ್ತಾನದ ಖೈದಿ ಜೈಲಿನಿಂದ ಪರಾರಿಯಾಗಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಜೈಲುಗಳಲ್ಲಿ ಸಿಆರ್ ಪಿಎಫ್ ಯೋಧರನ್ನು ನಿಯೋಜಿಸುವಂತೆ ಹೇಳಿದೆ ಎಂದು ಗೃಹ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.