ಬೊಮ್ಜ ಹಳ್ಳಿ 
ದೇಶ

ಭಾರತದ ಈ ಪುಟ್ಟ ಹಳ್ಳಿ ಇದೀಗ ಏಷ್ಯಾದಲ್ಲೇ ಕೋಟ್ಯಾಧಿಪತಿಗಳ ಹಳ್ಳಿ!

ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು...

ಇಟಾನಗರ: ತಾವಾಂಗ್ ಗ್ಯಾರಿಸನ್ ನ ಪ್ರಮುಖ ಯೋಜನೆ ಘಟಕಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭಾರತೀಯ ಸೇನೆಯು ಅರುಣಾಚಲಪ್ರದೇಶದ ಬೊಮ್ಜ ಎಂಬ ಹಳ್ಳಿಯನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು ಇದರ ಪರಿಹಾರ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಇದರಿಂದಾಗಿ ಈ ಹಳ್ಳಿ ಏಷ್ಯಾದ ಅತೀ ಶ್ರೀಮಂತ ಹಳ್ಳಿಯಾಗಿ ಹೊರಹೊಮ್ಮಿದೆ. 
ಬೊಮ್ಜ ಹಳ್ಳಿಯ ಎಲ್ಲಾ ಕುಟುಂಬಗಳಿಗೂ ಪರಿಹಾರ ಹಣವನ್ನು ವಿತರಿಸಲಾಗಿದ್ದು ಪ್ರತಿಯೊಂದು ಕುಟುಂಬವು ಕನಿಷ್ಠ 1 ಕೋಟಿಗಿಂತ ಹೆಚ್ಚು ಹಣ ಪಡೆದಿರುವುದರಿಂದ ಈ ಹಳ್ಳಿಯ ಜನರು ಕೋಟ್ಯಾಧಿಪತಿಗಳಾಗಿದ್ದಾರೆ. ಈ ಹಳ್ಳಿಯಲ್ಲಿ 31 ಕುಟುಂಬಗಳಿದ್ದು 29 ಕುಟುಂಬಗಳಿಗೆ ತಲಾ 1.09 ಕೋಟಿ ಪರಿಹಾರ ಹಣವನ್ನು ನೀಡಲಾಗಿದೆ. ಇನ್ನು ಒಂದು ಕುಟುಂಬಕ್ಕೆ 6.73 ಕೋಟಿ ಮತ್ತು ಇನ್ನೊಂದು ಕುಟುಂಬ 2.44 ಕೋಟಿ ರುಪಾಯಿಯನ್ನು ಪಡೆದಿದೆ. 
ಕೇಂದ್ರದ ರಕ್ಷಣಾ ಸಚಿವಾಲಯವು ಬೊಮ್ಜ ಹಳ್ಳಿಯಲ್ಲಿ 200 ಎಕರೆ ಭೂಮಿಯನ್ನು ಭೂಸ್ವಾಧೀನ ಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರ ಧನವಾಗಿ 40.8 ಕೋಟಿ ರುಪಾಯಿಯನ್ನು ಬಿಡುಗಡೆ ಮಾಡಿತ್ತು. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ಅವರು ಈ ಪರಿಹಾರ ಹಣವನ್ನು ಸೋಮವಾರ ವಿತರಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?