ಶ್ರೀನಗರ: ಭಯೋತ್ಪಾದಕ ಅಫ್ಜಲ್ ಗುರುವಿಗೆ ಗಲ್ಲುಶಿಕ್ಷೆ ವಿಧಿಸಿದ 5 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದು, ಕಣಿವೆ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟು ನಡೆಸುವ ಕೇಂದ್ರಗಳು ಬಂದ್ ಆಗಿದ್ದು, ಕೇವಲ ಬೆರಳೆಣಿಕೆಯಷ್ಟೇ ವಾಹನಗಳು ಸಂಚರಿಸುತ್ತಿದ್ದವು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಬಂದ್ ಪರಿಣಾಮ ಬೀರಿದ್ದು, ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್ ಗಳಲ್ಲಿನ ಹಾಜರಾತಿಯೂ ಕಡಿಮೆ ಇತ್ತು.
ಉಗ್ರ ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದರು. 2013 ರ ಫೆ.09 ರಂದು ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿತ್ತು.