ಆಂಧ್ರ ಪ್ರದೇಶ ವಿಶೇಷ ಸ್ಥಾನಮಾನಕ್ಕಾಗಿ ಎಲ್ಲಾ ಪಕ್ಷಗಳು ಒಂದಾಗಲಿ: ರಾಹುಲ್ ಗಾಂಧಿ
ಆಂಧ್ರ ಪ್ರದೇಶದ ವಿಶೇಷ ಸ್ಥಾನಮಾನಕ್ಕೆ ಅನುದಾನ ಬಿಡುಗಡೆ ಮತ್ತು ಪೋಲವರಂ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದು ಸೇರಿದಂತೆ ಆಂಧ್ರದ....
ನವದೆಹಲಿ: ಆಂಧ್ರ ಪ್ರದೇಶದ ವಿಶೇಷ ಸ್ಥಾನಮಾನಕ್ಕೆ ಅನುದಾನ ಬಿಡುಗಡೆ ಮತ್ತು ಪೋಲವರಂ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದು ಸೇರಿದಂತೆ ಆಂಧ್ರದ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಕರೆ ನೀಡಿದ್ದಾರೆ.
ವಿಶೇಷ ಸ್ಥಾನಮಾನಕ್ಕಾಗಿ ಆಂಧ್ರ ಪ್ರದೇಶ ಜನತೆಯ ಬೇಡಿಕೆಯನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಮತ್ತು ಈ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಲು ಇದು ಸೂಕ್ತ ಸಮಯ. ಈ ಮೂಲಕ ಆಂಧ್ರಕ್ಕೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಆಡಳಿತರೂಢ ಎನ್ ಡಿಎ ಮಿತ್ರ ಪಕ್ಷ ಟಿಡಿಪಿ ಸಹ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.