ದೇಶ

ಸೇನಾಶಿಬಿರದ ಮೇಲೆ ಉಗ್ರರ ದಾಳಿ : ಪೊಲೀಸ್ ಮುಖ್ಯಸ್ಥರೊಂದಿಗೆ ರಾಜನಾಥ್ ಮಾತುಕತೆ

Nagaraja AB

ನವದೆಹಲಿ: ಜಮ್ಮು - ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿಗೆ  ಸಂಬಂಧಿಸಿದಂತೆ ಗೃಹ ಸಚಿವ ರಾಜನಾಥ್ ಸಿಂಗ್  ಜಮ್ಮು -ಕಾಶ್ಮೀರದ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ.

ಉಗ್ರರ ದಾಳಿಗೆ ಸಂಬಂಧಿಸಿದಂತೆ ಜಮ್ಮು- ಕಾಶ್ಮೀರದ ಪೊಲೀಸ್ ವರಿಷ್ಠಾಧಿಕಾರಿ ಎಸ್. ಪಿ. ವಾಯಿದ್ ಅವರೊಂದಿಗೆ ರಾಜನಾಥ್ ಸಿಂಗ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಮಗ್ರ ಮಾಹಿತಿ ಪಡೆದಿದ್ದಾರೆ ಎಂದು ಗೃಹ ಸಚಿವಾಲಯ ಟ್ವಿಟ್ ಸಂದೇಶ ದಲ್ಲಿ ತಿಳಿಸಿದೆ.

ಪೊಲೀಸ್ ಮಹಾನಿರ್ದೇಶಕರಿಂದ ಅಲ್ಲಿನ ಪರಿಸ್ಥಿತಿ ಬಗ್ಗೆ ತಿಳಿದಿದ್ದು,  ಗೃಹ ಸಚಿವಾಲಯ ಹತ್ತಿರದಿಂದ ಪರಿಸ್ಥಿತಿಯನ್ನು ನಿಬಾಯಿಸುತ್ತಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ.

ಇಂದು ಮುಂಜಾನೆ ಜಮ್ಮುವಿನ ಸೇನಾ ಶಿಬಿರದ ಮೇಲೆ ಜೈಸ್  ಎ ಮೊಹಮ್ಮದ್ ಉಗ್ರ ಸಂಘಟನೆಯಿಂದ ದಾಳಿ ನಡೆದಿದ್ದು, ಮೂವರು  ಯೋಧರು ಹುತಾತ್ಮರಾಗಿದ್ದಾರೆ.

SCROLL FOR NEXT