ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ 
ದೇಶ

ಸುಂಜ್ವಾನ್ ಉಗ್ರರ ದಾಳಿ: ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂದೆ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭದ್ರತೆ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಶ್ರೀನಗರ: ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂದೆ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭದ್ರತೆ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿರುವ ಹಿನ್ನಲೆಯಲ್ಲಿ ಇಂದು ಬೆಳಿಕ್ಕೆ ಶ್ರೀನಗರಕ್ಕೆ ತೆರಳಿರುವ ರಾವತ್ ಅವರು, ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ದಾಳಿ ಕುರಿತಂತೆ ಹಾಗೂ ಭದ್ರತೆಗಳ ಕುರಿತಂತೆ ಅಧಿಕಾರಿಗಳು ರಾವತ್ ಅವರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ. 
ಉಗ್ರರು ದಾಳಿ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜ್ಯಾಪಾಲ ಎನ್ಎನ್ ವೊಹ್ರಾ ಅವರು, ರಾಜಧಾನಿ ದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಜಮ್ಮು ಮತ್ತು ಕಾಶ್ಮೀರದ ಭದ್ರತೆ ಕುರಿತಂತೆ ಮಾತುಕತೆ ನಡೆಸಿದರು. 
ಉಗ್ರರ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ದೇಶದ ಭದ್ರತಾಪಡೆಗಳ ಹಿಂದೆ ದೇಶ ನಿಲ್ಲಬೇಕು. ಯೋಧರನ್ನು ಜನರು ಪ್ರೋತ್ಸಾಹಿಸಬೇಕು. ಇಂತಹ ಘಟನೆಗಳಲ್ಲಿಯೂ ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿರುವುದು ದುರಾದೃಷ್ಟಕರ. ನಮ್ಮ ಯೋಧರ ರಕ್ತ ಹಾಗೂ ಬೆವರು ಕುರಿತಂತೆ ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆಂದು ಹೇಳಿದ್ದಾರೆ. 
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮಾತನಾಡಿ, ಇಡೀ ವಿಶ್ವದ ನಾಗರೀಕತೆ ಇಂದು ಉಗ್ರರೊಂದಿಗೆ ಸಂಘರ್ಷಕ್ಕೆ ಇಳಿದಿದೆ. ಉಗ್ರರೊಂದಿಗೆ ಹೋರಾಟ ನಡೆಸುವ ವೇಳೆ ಇಂತಹ ದುರಾದೃಷ್ಟಕರ ಘಟನೆಗಳನ್ನು ನಾವು ಎದುರಿಸಬೇಕಾಗುತ್ತದೆ. ಏನೇ ಆದರೂ, ಜಮ್ಮು ಮತ್ತು ಕಾಶ್ಮೀರಕ್ಕಾಗಿ ಹಾಗೂ ಉಗ್ರರ ವಿರುದ್ದ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡುವುದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!