ಮುಂದಿನ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಉಮಾಭಾರತಿ ಘೋಷಣೆ
ಮುಂಬರುವ ಯಾವುದೇ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಹಾಗೂ ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವುದಾಗಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ...
ಝಾನ್ಸಿ: ಮುಂಬರುವ ಯಾವುದೇ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಹಾಗೂ ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವುದಾಗಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಉಮಾಭಾರತಿ, ವಯಸ್ಸು ಮತ್ತು ಆರೋಗ್ಯದ ಕಾರಣದಿಂದಾಗಿ ಚುನಾವಣಾ ಕಣದಿಂದ ದೂರವುಳಿಯಲು ನಿರ್ಧರಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಝಾನ್ಸಿ ಲೋಕಸಭಾ ಕ್ಷೇತ್ರದ 2 ಬಾರಿ ಸಂಸದೆಯಾಗಿ ಆಯ್ಕೆಯಾಗಿದ್ದು, ಪಕ್ಷಕ್ಕಾಗಿ ಅವಿರತವಾಗಿ ದುಡಿದಿರುವುದಾಗಿ ಉಮಾ ಭಾರತಿ ತಿಳಿಸಿದ್ದಾರೆ, ಮಂಡಿ ಹಾಗೂ ಸೊಂಟ ನೋವಿನಿಂದ ಬಳಲುತ್ತಿದ್ದು, ತಮ್ಮ ಅನಾರೋಗ್ಯದ ಕಾರಣದಿಂದಾಗಿ ಚುನಾವಣಾ ಕಣದಿಂದ ದೂರ ಉಳಿಯುತ್ತಿರುವುದಾಗಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.