ವ್ಯಾಲೆಂಟೈನ್ಸ್ ಡೇ ವಿರೋಧಿಸಿ ಮಹಾರಾಷ್ಟ್ರದ ನಾಗಪುರದಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ದೇಶ

ವ್ಯಾಲೆಂಟೈನ್ಸ್ ಡೇ : ಪ್ರೇಮಿಗಳಿಗೆ ಮದುವೆ -ಭಜರಂಗದಳ ಭರವಸೆ

ವಿಶ್ವದಾದ್ಯಂತ ಇಂದು ವ್ಯಾಲೆಂಟೈನ್ಸ್ ಡೇ ಆಚರಿಸಲಾಗುತ್ತಿದ್ದು, ಭಾರತದಲ್ಲಿ ಇದರ ಆಚರಣೆಗೆ ಭಜರಂಗದಳದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಮಹಾರಾಷ್ಟ್ರ: ವಿಶ್ವದಾದ್ಯಂತ ಇಂದು ವ್ಯಾಲೆಂಟೈನ್ಸ್ ಡೇ ಆಚರಿಸಲಾಗುತ್ತಿದ್ದು, ಭಾರತದಲ್ಲಿ ಇದರ ಆಚರಣೆಗೆ ಭಜರಂಗದಳದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದು ನಮ್ಮ ದೇಶದ ಸಂಸ್ಕೃತಿಯಲ್ಲ, ವಿದೇಶಿ ಸಂಸ್ಕೃತಿ. ಹೀಗಾಗಿ ಆಚರಿಸಬಾರದೆಂದು ಆಗ್ರಹಿಸಿ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಪ್ರೇಮಿಗಳ ದಿನಾಚರಣೆ  ವಿರೋಧಿಸಿ ಮಹಾರಾಷ್ಟ್ರದ ನಾಗಪುರ ಹಾಗೂ ಹೈದ್ರಾಬಾದಿನಲ್ಲಿ ಭಜರಂಗದಳದಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು , ಪ್ರೇಮಿಗಳ ದಿನಾಚರಣೆ ಆಚರಿಸುವ ಹಕ್ಕನ್ನು ನೀವು ಹೊಂದಿದ್ದರೇ, ನಮ್ಮ ದೇಶದ ಸಂಸ್ಕೃತಿಯನ್ನು ರಕ್ಷಿಸುವ ಹಕ್ಕು ನಮಗೂ ಇದೆ ಎಂದರು. ಪ್ರೇಮಿಗಳು ಬೀದಿಗಳಲ್ಲಿ ಓಡಾಡುವುದು ಕಂಡುಬಂದರೆ ಅವರನ್ನು ಪತ್ತೆ ಹಚ್ಚಿ ಮದುವೆ ಮಾಡಿಸುವುದಾಗಿ ಹೇಳಿದರು.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!