ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಚೌರಿ ಜಿಲ್ಲೆಯಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆ.
ಅಂತಾರಾಷ್ಟ್ರೀಯ ಗಡಿ ರಚೌರಿ ಜಿಲ್ಲೆಯ ನೌಶೆರಾದಲ್ಲಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಸಣ್ಣ ಪ್ರಮಾಣದ ಗುಂಡಿನ ದಾಳಿ ನಡೆಸುತ್ತಿದ್ದು ಇದಕ್ಕೆ ಭಾರತೀಯ ಯೋಧರು ಪ್ರತ್ಯುತ್ತರ ನೀಡುತ್ತಿದ್ದಾರೆ ಎಂದು ಸೇನಾ ವಕ್ತಾರ ತಿಳಿಸಿದ್ದಾರೆ.
ಫೆಬ್ರವರಿ 11ರಂದು ಪಾಕ್ ಸೈನಿಕರು ರಚೌರಿ ಮತ್ತು ಪೂಂಚ್ ಜಿಲ್ಲೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಇನ್ನು ಫೆಬ್ರವರಿ 10 ನಶೌರಿ ಜಿಲ್ಲೆಯಲ್ಲಿ ಪಾಕ್ ಸೈನಿಕರ ಅಪ್ರಚೋದಿನ ಗುಂಡಿನ ದಾಳಿಗೆ ಪರ್ವೀನ್ ಅಖ್ತರ್ ಮೃತಪಟ್ಟಿದ್ದರು.