ಹಲಿ ಪೋಲೀಸರಿಂದ ಇಂಡಿಯನ್ ಮುಜಾಹಿದೀನ್ ಭಯೋತ್ಪಾದಕ ಬಂಧನ 
ದೇಶ

ಬಾತ್ಲಾ ಹೌಸ್ ಎನ್ ಕೌಂಟರ್ ಪ್ರಕರಣ: ದೆಹಲಿ ಪೋಲೀಸರಿಂದ ಇಂಡಿಯನ್ ಮುಜಾಹಿದೀನ್ ಭಯೋತ್ಪಾದಕ ಬಂಧನ

ದೆಹಲಿ ಪೊಲೀಸರು ಶಂಕಿತ ಇಂಡಿಯನ್ ಮುಜಾಹಿದೀನ್ (ಐಎಂ) ಭಯೋತ್ಪಾದಕನನ್ನು ಬಂಧಿಸಿದ್ದಾರೆ.

ನವದೆಹಲಿ: ದೆಹಲಿ ಪೊಲೀಸರು ಶಂಕಿತ ಇಂಡಿಯನ್ ಮುಜಾಹಿದೀನ್ (ಐಎಂ)  ಭಯೋತ್ಪಾದಕನನ್ನು ಬಂಧಿಸಿದ್ದಾರೆ. 2008ರ ಬಾತ್ಲಾ ಹೌಸ್ ಎನ್ ಕೌಂಟರ್ ಪ್ರಕರಣದಲ್ಲಿ ಬೇಕಾದವನಾಗಿದ್ದ ಭಯೋತ್ಪಾದಕ  ಅರಿಜ್ ಖಾನ್ ನನ್ನು ದೆಹಲಿ ಪೋಲೀಸ್ ಸ್ಪೆಷಲ್ ಸೆಲ್ ನ ಅಧಿಕಾರಿಗಳು  ಬಂಧಿಸಿದ್ದಾರೆ.
ಖಾನ್ ಬಾಟ್ಲಾ ಹೌಸ್ ನಲ್ಲಿ ತನ್ನ ಇತರೇ ನಾಲ್ವರು ಸಹಚರರೊಡನೆ ಹಾಜರಿದ್ದು ಪೋಲೀಸ್ ಎನ್ ಕೌಂಟರ್ ಸಮಯದಲ್ಲಿ ಅಲ್ಲಿಂದ ತಪ್ಪಿಸಿಕೊಳ್ಳಲು ಸಮರ್ಥನಾಗಿದ್ದನು.
ಸೆಪ್ಟೆಂಬರ್ 19, 2008ರಲ್ಲಿ ದೆಹಲಿಯ ಜಾಮಿಯಾ ನಗರದಲ್ಲಿ ನಡೆದಿದ್ದ ಎನ್ ಕೌಂಟರ್ ನಲ್ಲಿ ಇಬ್ಬರು ಇಂಡಿಯನ್ ಮುಜಾಹಿದೀನ್ ಭಯೋತ್ಪಾದಕರು ಹತರಾಗಿ ಅನೇಕ ಮಂದಿ ಬಂಧಿತರಾಗಿದ್ದರು.
ಪೊಲೀಸ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಎನ್ ಕೌಂಟರ್ ಸ್ಪೆಷಲಿಸ್ಟ್ ಇನ್ಸ್ ಪೆಕ್ಟರ್ ಮೋಹನ್ ಚಂದ್ ಶರ್ಮಾ ಸಹ ಈ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದರು. 
ಈ ಪ್ರಕರಣಕ್ಕೆ ಸಂಬಂಧಿಸಿ ಜೂಲೈ 2013 ರಲ್ಲಿ ವಿಚಾರಣಾ ನ್ಯಾಯಾಲಯವು ಇಂಡಿಯನ್ ಮುಜಾಹಿದೀನ್ (ಐಎಂ) ಭಯೋತ್ಪಾದಕ ಶಾಹಝಾದ್ ಅಹಮದ್ ನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಶಾಹಝಾದ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಆ ಅರ್ಜಿಯ ವಿಚಾರಣೆ ಇನ್ನೂ ಬಾಕಿ ಉಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!