ಹಲ್ಲೆಗೊಳಗಾದ ಮಹಿಳೆ 
ದೇಶ

ಗರ್ಭಿಣಿ ಹೊಟ್ಟೆಗೆ ಒದ್ದ ಸಿಪಿಎಂ ನಾಯಕ: ಮಹಿಳೆಗೆ ಬಲವಂತವಾಗಿ ಗರ್ಭಪಾತ

ಗರ್ಭಿಣಿಯೊಬ್ಬಳ ಹೊಟ್ಟೆಗೆ ಸಿಪಿಂ ನಾಯಕನೊಬ್ಬ ಒದ್ದ ಪರಿಣಾಮವಾಗಿ ಆಕೆ ಬಲವಂತದ ಗರ್ಭಪಾತಕ್ಕೆ ಗುರಿಯಾದ ಪ್ರಕರಣ ವರದಿಯಾಗಿದೆ....

ಕೊಜಿಕ್ಕೋಡ್: ಗರ್ಭಿಣಿಯೊಬ್ಬಳ ಹೊಟ್ಟೆಗೆ ಸಿಪಿಂ ನಾಯಕನೊಬ್ಬ ಒದ್ದ ಪರಿಣಾಮವಾಗಿ ಆಕೆ ಬಲವಂತದ ಗರ್ಭಪಾತಕ್ಕೆ ಗುರಿಯಾದ ಪ್ರಕರಣ ವರದಿಯಾಗಿದೆ.
ಸಿಪಿಎಂ ನಾಯಕನಿಂದ ಹೊಟ್ಟೆಗೆ ಒದೆತ ತಿಂದ ಮಹಿಳೆಯು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.ಮಹಿಳೆಯ ಪತಿ ಮತ್ತು ಪಕ್ಕದ ಮನೆಯ ಪುರುಷನೋರ್ವನ ನಡುವೆ ಮಾತಿನ ಜಟಾಪಟಿ ನಡೆದಿತ್ತು. ಆಗ ಇನ್ನಿಬ್ಬರು ಪುರುಷರು ಅಲ್ಲಿಗೆ ಬಂದ ಮಹಿಳೆಯ ಪತಿಯ ಮೇಲೆ ಹಲ್ಲೆ ನಡೆಸತೊಡಗಿದರು. ತಡೆಯಲು ಬಂದ ಮಹಿಳೆಯನ್ನು ಹಲ್ಲೆಕೋರ ಪುರುಷರಲ್ಲಿ  ಒಬ್ಬನಾದ ಸ್ಥಳೀಯ ಸಿಪಿಎಂ ನಾಯಕರು ಮಹಿಳೆಯ ಹೊಟ್ಟೆಗೆ ಒದೆದಿದ್ದಾನೆ. ಪರಿಣಾಮ ಆಕೆಗೆ ಒಡನೆಯೇ ರಕ್ತಸ್ರಾವ ಆರಂಭವಾಯಿತು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು; ಅಲ್ಲಿ ಆಕೆಯ ಗಂಭೀರ ಪರಿಸ್ಥಿತಿಯನ್ನು ಪರಿಶೀಲಿಸಿದ ವೈದ್ಯರು ಅನಿವಾರ್ಯವಾಗಿ ಗರ್ಭಪಾತ ಮಾಡಲಾಯಿತು.
ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ.ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಮಹಿಳೆಯ ಹೊಟೆಗೆ ಒದ್ದ ಮುಖ್ಯ ಆರೋಪಿ ತಲೆತಪ್ಪಿಸಿಕೊಂಡಿದ್ದಾನೆ. ಹೊಟ್ಟೆಗೆ ಒದ್ದು ಬಲವಂತದ ಗರ್ಭಪಾತಕ್ಕೆ ಕಾರಣನಾದ ಸ್ಥಳೀಯ ಸಿಪಿಎಂ ನಾಯಕನ ಗುರುತು ಬಹಿರಂಗ ಮಾಡದಂತೆ ತಮ್ಮ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಸಂತ್ರಸ್ತ ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ