ಸಂಗ್ರಹ ಚಿತ್ರ 
ದೇಶ

'ಕಾವೇರಿ ನಿರ್ವಹಣಾ ಮಂಡಳಿ ಕೇಂದ್ರದ ಕೆಲಸ': ಕರ್ನಾಟಕದ ಮೇಲ್ಮನವಿ ಭಾಗಶಃ ಒಪ್ಪಿದ ಸುಪ್ರೀಂ ಕೋರ್ಟ್

ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಕಾವೇರಿ ತೀರ್ಪು ಪ್ರಕಟವಾಗಿದ್ದು, ಕರ್ನಾಟಕದ ವಾದವನ್ನು ಭಾಗಶಃ ಒಪ್ಪಿರುವ ಸುಪ್ರೀಂ ಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಕೆಲಸ ಎಂದು ಹೇಳಿದೆ.

ನವದೆಹಲಿ: ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಕಾವೇರಿ ತೀರ್ಪು ಪ್ರಕಟವಾಗಿದ್ದು, ಕರ್ನಾಟಕದ ವಾದವನ್ನು ಭಾಗಶಃ ಒಪ್ಪಿರುವ ಸುಪ್ರೀಂ ಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಕೆಲಸ ಎಂದು ಹೇಳಿದೆ.
ಬ್ರಿಟೀಶ್ ಕಾಲದ ಒಪ್ಪಂದಗಳ ಬಗ್ಗೆ ತೀರ್ಪಿನಲ್ಲಿ ಉಲ್ಲೇಖ ಮಾಡಿರುವ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಸಂವಿಧಾನದಡಿಯಲ್ಲಿ ಚೌಕಾಸಿ ಮಾಡುವ ಹಕ್ಕು ಕರ್ನಾಟಕಕ್ಕೆ ಇದೆ ಎಂದು ಹೇಳಿದೆ. ಅಲ್ಲದೆ ಕರ್ನಾಟಕದ ಎಲ್ಲ  ಮನವಿಗಳನ್ನು ಭಾಗಶಃ ಒಪ್ಪಿರುವ ಸುಪ್ರೀಂ ಕೋರ್ಟ್ ಕರ್ನಾಟಕ ನೀರಾವರಿ ಪ್ರದೇಶವನ್ನು ಹೆಚ್ಚಳ ಮಾಡಿಕೊಳ್ಳಬಹುದು ಎಂದು ಹೇಳಿದೆ. ಪ್ರಮುಖವಾಗಿ ತಮಿಳುನಾಡು ಇಟ್ಟಿದ್ದ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು  ಮಾತನಾಡಿರುವ ಸುಪ್ರೀಂ ಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದೆ.
ಒಟ್ಟಾರೆ ಕರ್ನಾಟಕ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದ್ದ ಕಾವೇರಿ ತೀರ್ಪು ಕರ್ನಾಟಕದ ನಿರೀಕ್ಷೆ ತಲುಪಿಲ್ಲವಾದರೂ, ಕೊಂಚ ನಿರಾಳತೆಯನ್ನು ಖಂಡಿತಾ ತಂದಿದೆ.
ಪ್ರಕರಣದ ಹಿನ್ನೆಲೆ
1990ರಲ್ಲಿ ರಚಿಸಲಾಗಿದ್ದ ಕಾವೇರಿ ಜಲವಿವಾದ ನ್ಯಾಯಮಂಡಳಿಯು ಸತತ 17 ವರ್ಷಗಳ ಕಾಲ ವಿಚಾರಣೆ ನಡೆಸಿ 2007ರ ಫೆಬ್ರುವರಿ 5ರಂದು ನೀಡಿದ್ದ ಐತೀರ್ಪಿನಲ್ಲಿದ್ದ ಕೆಲವು ಅಂಶಗಳನ್ನು ಒಪ್ಪದೇ ಕಣಿವೆ ವ್ಯಾಪ್ತಿಯ  ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದವು. ಈ ಸಂಬಂಧ 2017ರ ಜುಲೈ 11ರಿಂದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, 2017ರ ಸೆಪ್ಟೆಂಬರ್‌ 20ರವರೆಗೆ ಒಟ್ಟು 28 ದಿನ  ವಿಚಾರಣೆ ನಡೆಸಿ ತೀರ್ಪನ್ನು ಕಾದಿರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ