ಕಮಲ್ ಹಾಸನ್ 
ದೇಶ

ಕಾವೇರಿ ತೀರ್ಪು: ತಮಿಳುನಾಡು, ಕರ್ನಾಟಕ ಒಂದಾಗಲು ಕಮಲ್‌ ಹಾಸನ್ ಕರೆ

ಈಗಾಗಲೇ ರಾಜಕೀಯ ಪ್ರವೇಶಿಸಿ, ಸ್ವತಂತ್ರ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿರುವ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರು, ಕಾವೇರಿ ನದಿ ನೀರು ಹಂಚಿಕೆ....

ಚೆನ್ನೈ: ಈಗಾಗಲೇ ರಾಜಕೀಯ ಪ್ರವೇಶಿಸಿ, ಸ್ವತಂತ್ರ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿರುವ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸ್ನೇಹ ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಕಡಿಮೆ ನೀರು ಹಂಚಿಕೆ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಮಲ್ ಹಾಸನ್ ಅವರು, ನದಿಗಳು ಯಾರಿಗೂ ಸೇರಿದ್ದಲ್ಲ. ನದಿ ನೀರನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಕೋರ್ಟ್ ಹೇಳಿದೆ ಎಂದರು.
ತಮಿಳುನಾಡಿಗೆ ಕಡಿಮೆ ನೀರಿನ ಹಂಚಿಕೆ ಖಂಡಿತವಾಗಿ ನಿರಾಶಾದಾಯಕವಾಗಿದೆ, ಆದರೆ ರಾಜಕೀಯ ಪಕ್ಷಗಳು ಇದನ್ನೇ ಮತಬ್ಯಾಂಕ್‌ ರೀತಿ ನೋಡಬಾರದು' ಎಂದು ಕಮಲ್ ಹಾಸನ್ ಅವರು ಹೇಳಿದ್ದಾರೆ. 
ಕರ್ನಾಟಕ ಹಾಗೂ ತ.ನಾಡು ರೈತರು ಒಂದಾಗಬೇಕು ಎಂದು ಹೇಳಿರುವ ಕಮಲ್‌ ಹಾಸನ್‌, 'ಲಭ್ಯವಿರುವ ನೀರನ್ನು ವಿವೇಚನೆಯಿಂದ ಬಳಸಿಕೊಳ್ಳಬೇಕಾದ ಮಾರ್ಗಗಳು ಮತ್ತು ವಿಧಾನಗಳನ್ನು ನಾವು ಕಂಡುಕೊಳ್ಳಬೇಕಾಗಿದೆ. ಅಂತರ್ಜಲವನ್ನು ರಕ್ಷಿಸಲು ಸರ್ಕಾರ ವಿಫಲಗೊಂಡರೆ, ನಾವು ಅದನ್ನು ರಕ್ಷಿಸಬೇಕು' ಎಂದು ಹೇಳಿದರು.
ಸುಪ್ರೀಂ ಪ್ರಕಟಿಸಿರುವ ಅಂತಿಮ ತೀರ್ಪಿನಿಂದ ಕರ್ನಾಟಕ ಒಂದು ಮಟ್ಟಿಗೆ ನಿರಾಳಗೊಂಡಿದೆ. ತೀರ್ಪಿನಲ್ಲಿ ತಮಿಳುನಾಡಿಗೆ ಹರಿಸುವ ನೀರಿನಲ್ಲಿ 14.5 ಟಿಎಂಸಿ ಕಡಿತಗೊಳಿಸಿ ಆದೇಶ ನೀಡಿರುವ ಕೋರ್ಟ್‌, ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು ಹಂಚಿಕೆಗೆ ಅವಕಾಶ ಕಲ್ಪಿಸಿರುವುದು ಖುಷಿಯ ವಿಚಾರ. ಬೆಂಗಳೂರಿಗೆ ಹೆಚ್ಚುವರಿಯಾಗಿ 4.75ಟಿಎಂಸಿ ನೀರು ಕುಡಿಯುವುದಕ್ಕೆ ಬಳಸಬಹುದು ಎಂದು ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!