ರಾಷ್ಟ್ರಪತಿ ಭವನದಲ್ಲಿ ರೌಹಾನಿ ಅವರಿಗೆ ಗೌರವ ವಂದನೆ ಸಲ್ಲಿಸಿದ ಸೈನಿಕರು
ನವದೆಹಲಿ: ಭಾರತ ಪ್ರವಾಸದಲ್ಲಿರುವ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಅವರು ಶನಿವಾರ ದೆಹಲಿಗೆ ಆಗಮಿಸಿದ್ದು, ಭಾರತೀಯ ಸೇನೆಯ ಸೈನಿಕರಿಂದ ಗಾರ್ಡ್ ಆಫ್ ಹಾನರ್ ಗೌರವ ಸ್ವೀಕರಿಸಿದರು.
ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ ರೌಹಾನಿ ಮೊದಲಿಗೆ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಬಳಿಕ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ರೌಹಾನಿ ಅವರಿಗೆ ರಾಷ್ಟ್ರಪತಿ ಭವನದ ಆವರಣದಲ್ಲಿ ಸೈನಿಕರು ಗೌರವ ವಂದನೆ ಸಲ್ಲಿಕೆ ಮಾಡಿದರು. ಇಂದು ರೌಹಾನಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ಜು, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಂತೆಯೇ ಉಭಯ ದೇಶಗಳ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ನಿನ್ನೆ ಹೈದರಾಬಾದ್ ಗೆ ಆಗಮಿಸಿದ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಅವರು ಐತಿಹಾಸಿ ಮೆಕ್ಕಾ ಮಸೀದಿಗೆ ಭೇಟಿ ನೀಡಿದರು. ಬಳಿಕ ಖುತುಬ್ ಶಾಹಿ ಆಡಳಿತ ನಡೆಸುತ್ತಿದ್ದ ಗೋಲ್ಕೊಂಡ ಕೋಟೆ ವೀಕ್ಷಿ,ಸಿದ ರೌಹಾನಿ ಬಳಿಕ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸಿಎಂಗಳಿಂದ ಆತಿಥ್ಯ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics