ಪ್ರತ್ಯೇಕತಾವಾದಿ ಸಯ್ಯದ್ ಅಲಿ ಗಿಲಾನಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪ್ರತಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಶ್ರೀನಗರದ ಹಲವೆಡೆ ಶನಿವಾರ ನಿರ್ಬಂಧ ಹೇರಿದ್ದಾರೆಂದು ತಿಳಿದುಬಂದಿದೆ.
ಬಂಧನಕ್ಕೊಳಗಾಗಿದ್ದ ಸ್ಥಳೀಯರನ್ನು ಇತರೆ ಜೈಲುಗಳಿಗೆ ಸ್ಥಳಾಂತರ ಮಾಡುತ್ತಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತ್ಯೇಕತಾವಾದಿಗಳಾದ ಸಯ್ಯದ್ ಅಲಿ ಗಿಲಾನಿ, ಮಿರ್ವೈಜ್ ಉಮರ್ ಫರೂಖ್ ಮತ್ತು ಮುಹಮ್ಮದ್ ಯಾಸಿನ್ ಮಲ್ಲಿಕ್ ಅವರು, ಪ್ರತಿಭಟನೆಗೆ ಕರೆನೀಡಿದ್ದರು.
ಈ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಅಧಿಕಾರಿಗಳು ಶ್ರೀನಗರದಲ್ಲಿ ನಿರ್ಬಂಧ ಹೇರಿದ್ದಾರೆ. ಪ್ರತಿಭಟರೆ ಹಿನ್ನಲೆಯಲ್ಲಿ ಶ್ರೀನಗರದ ಹಲವು ಅಂಗಡಿಗಳು ಬಂದ್ ಆಗಿದ್ದು, ವ್ಯವಹಾರ ಸಂಪೂರ್ಣವಾಗಿ ಬಂದ್ಆಗಿದೆ, ಅಲ್ಲದೆ, ಸಾರಿಗೆ ವ್ಯವಸ್ಥೆಗಳು ಕೂಡ ಬಂದ್ ಆಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಜಮ್ಮುವಿನ ಬನ್ನಿಹಾಲ್ ಟೌನ್ ಮತ್ತು ಬಾರಾಮುಲ್ಲಾದಲ್ಲಿ ರೈಲು ಸೇವೆಗಳು ಬಂದ್ ಆಗಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶ್ರೀನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.