ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನೋಟ್ ಬ್ಯಾನ್ ವೇಳೆ ದೇಶ ಲೂಟಿ ಮಾಡಲು ನೀರವ್ ಮೋದಿಗೆ ಅವಕಾಶ: ರಾಹುಲ್ ಗಾಂಧಿ

ಉದ್ಯಮಿ ನೀರವ್ ಮೋದಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಪ್ರಧಾನಿ....

ರಾಹುಲ್ ಗಾಂಧಿ
Lingaraj Badiger
Updated On : 17 Feb 2018, 7:41 am
ನವದೆಹಲಿ: ಉದ್ಯಮಿ ನೀರವ್ ಮೋದಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನೋಟು ಅಪನಗದಿಕರಣದ ವೇಳೆ ಬಿಲಿಯನೇರ್ ಆಭರಣ ವಿನ್ಯಾಸಕ ನೀರವ್ ಮೋದಿ ದೇಶ ಲೂಟಿ ಮಾಡಲು ಮೋದಿ ಸರ್ಕಾರ ಅವಕಾಶ ನೀಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಉನ್ನತ ಮಟ್ಟದ, ಪ್ರಭಾವಿಗಳ ರಕ್ಷಣೆ ಇಲ್ಲದೆ 22 ಸಾವಿರ ಕೋಟಿ ರುಪಾಯಿ ವಂಚನೆ ಮಾಡಲು ಸಾಧ್ಯವಿಲ್ಲ. ಇದರಲ್ಲಿ ಕೇಂದ್ರ ಸರ್ಕಾರದ ಪ್ರಭಾವಿಗಳ ಪಾತ್ರ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಉತ್ತರ ನೀಡಬೇಕು ಎಂದು ರಾಹುಲ್ ಆಗ್ರಹಿಸಿದ್ದಾರೆ.

Advertisement

Advertisement

ಪ್ರತಿ ಬಾರಿಯೂ ಬಿಜೆಪಿ ಜವಾಬ್ದಾರಿ ತೆಗೆದುಕೊಳ್ಳಲು ನಿರಾಕರಿಸುತ್ತದೆ. ಆದರೆ ಈ ಬಾರಿ ಪ್ರಧಾನಿ ಮೋದಿ ದೇಶದ ಜನತೆಗೆ ಉತ್ತರ ನೀಡಲೆಬೇಕು ಎಂದಿದ್ದಾರೆ.
ನೀರವ್ ಮೋದಿ 22 ಸಾವಿರ ಕೋಟಿ ರುಪಾಯಿ ತೆಗೆದುಕೊಂಡು ವಿದೇಶಕ್ಕೆ ಪರಾರಿಯಾಗಿದ್ದರೆ, ಪ್ರಧಾನಿ ಮೋದಿ ಅವರು ಮಕ್ಕಳಿಗೆ ಪರೀಕ್ಷೆ ಬರೆಯುವುದು ಹೇಗೆ ಎಂದು ಹೇಳುತ್ತಿದ್ದಾರೆ. ಆದರೆ ನೀರವ್ ಮೋದಿ ತೆಗೆದುಕೊಂಡು ಹೋದ ಹಣಕ್ಕೆ ಯಾರು ಜವಾಬ್ದಾರರು? ಎಂದು ರಾಹುಲ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments