ಸಂಗ್ರಹ ಚಿತ್ರ 
ದೇಶ

ಪಿಎನ್‏ಬಿ ವಂಚನೆ ಪ್ರಕರಣ: ಬ್ಯಾಂಕ್ ಮಾಜಿ ಡೆಪ್ಯೂಟಿ ಮ್ಯಾನೇಜರ್ ಸೇರಿ ಮೂವರನ್ನು ಬಂಧಿಸಿದ ಸಿಬಿಐ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್'ನ ಮಾಜಿ ಡಿಜಿಎಂ ಗೋಕುಲ್ ನಾಥ್ ಶೆಟ್ಟಿ ಸೇರಿದಂತೆ ಮೂವರನ್ನು ಸಿಬಿಐ ಶನಿವಾರ ಬಂಧನಕ್ಕೊಳಪಡಿಸಿದೆ...

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್'ನ ಮಾಜಿ ಡಿಜಿಎಂ ಗೋಕುಲ್ ನಾಥ್ ಶೆಟ್ಟಿ ಸೇರಿದಂತೆ ಮೂವರನ್ನು ಸಿಬಿಐ ಅಧಿಕಾರಿಗಳ ತಂಡ ಶನಿವಾರ ಬಂಧನಕ್ಕೊಳಪಡಿಸಿದೆ. 
ಗೋಕುಲ್ ನಾಥ್ ಶೆಟ್ಟಿ ಜೊತೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್'ನ ಮನೋಜ್ ಕಾರತ್ ಹಾಗೂ ನೀರವ್ ಮೋದಿ ಗ್ರೂಪ್ ಆಫ್ ಫರ್ಮ್ಸ್'ನ ಹೇಮತ್ ಭಟ್ ಎಂಬುವವರನ್ನೂ ಸಿಬಿಐ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು, ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಮೂವರನ್ನು ಶನಿವಾರ ಹಾಜರುಪಡಿಸಲಿದ್ದಾರೆಂದು ತಿಳಿದುಬಂದಿದೆ. 
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಪ್ರಕರಣ ಸಂಬಂಧ ಬ್ಯಾಂಕ್'ನ ಮಾಜಿ ಡಿಜಿಎಂ ಗೋಕುಲ್ ನಾಥ್ ಶೆಟ್ಟಿಯ ಮಲಾಡ್ ನಲ್ಲಿರುವ ಮನೆಗೆ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಗೋಕುಲ್ ಅವರು ಅಧಿಕಾರಿಗಳಿಗೆ ಸಿಕ್ಕಿರಲಿಲ್ಲ. ದಾಳಿ ಸಂದರ್ಭ ಜಾರಿ ನಿರ್ದೇಶನಾಲಯವು ರೂ.5,100 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಗಳನ್ನು ವಶಪಡಿಸಿಕೊಂಡಿತ್ತು. ಪ್ರಕರಣ ವಿಚಾರಣೆಗಳು ಹಾಗೂ ತನಿಖೆಗಳು ಮುಂದುವರೆದಿವೆ ಎಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT