ರಜನೀಕಾಂತ್ 
ದೇಶ

ಕಾವೇರಿ ತೀರ್ಪು ನಿರಾಶೆ ತಂದಿದೆ: ಪರಿಶೀಲನಾ ಅರ್ಜಿ ಸಲ್ಲಿಸಲು ತಮಿಳುನಾಡು ಸರ್ಕಾರಕ್ಕೆ ರಜನಿ ಸಲಹೆ

ಕಾವೇರಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನ ವಿಭಾಗೀಯ ಪೀಠದ ತೀರ್ಪಿನ ಬಗ್ಗೆ ಸೂಪರ್ ಸ್ಟಾರ್ ರಜನೀಕಾಂತ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ....

ಚೆನ್ನೈ: ಕಾವೇರಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನ ವಿಭಾಗೀಯ ಪೀಠದ ತೀರ್ಪಿನ ಬಗ್ಗೆ ಸೂಪರ್ ಸ್ಟಾರ್ ರಜನೀಕಾಂತ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ತಮಿಳುನಾಡಿಗೆ ಬಿಡುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಿ ಆದೇಶ ಹೊರಡಿಸಿರುವುದು ನಿರಾಸೆ ತಂದಿದೆ, ತಮಿಳುನಾಡು ಸರ್ಕಾರ, ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿಗೆ ನೀರಿನ ಹಂಚಿಕೆ ಪ್ರಮಾಣವನ್ನು ಕಡಿತಗೊಳಿಸಿ ನೀಡಿರುವ ಸುಪ್ರೀಂ ತೀರ್ಪು, ತಮಿಳುನಾಡಿನ ರೈತರ ಜೀವನದ ಮೇಲೆ ಪರಿಣಮ ಬೀರುತ್ತದೆ ಎಂದು ಹೇಳಿರುವ ರಜನಿ, ತಾವು ಶೀಘ್ರವೇ ರಾಜಕೀಯ ಪ್ರವೇಶಿಸಲಿದ್ದು, ಅಲ್ಲಿಯವರೆಗೂ ರಾಜ್ಯ ಸರ್ಕಾರ ಕ್ರಮ ಕೈಗೊಂಡು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಟ್ವಿಟ್ ನಲ್ಲಿ ಬರೆದಿದ್ದಾರೆ.
ಕರ್ನಾಟಕಕ್ಕೆ ಒಟ್ಟು 284.75 ಟಿಎಂಸಿ ನೀರು ಬಳಸಿಕೊಳ್ಳಬಹುದು ಹಾಗೂ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 4.75 ಟಿಎಂಸಿ ನೀರು ಬಳಸಿಕೊಳ್ಳಬಹುದಾಗಿದೆ. ತಮಿಳುನಾಡಿಗೆ ಪ್ರತಿ ವರ್ಷ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ ಮಾಡಿದ್ದು, ತಮಿಳುನಾಡಿಗೆ 177.25 ಟಿಎಂಸಿ ನೀರು ನಿಗದಿ ಪಡಿಸಿದೆ. ಈ ಮೂಲಕ ಕರ್ನಾಟಕ 14.75 ಟಿಎಂಸಿ ನೀರು ಹೆಚ್ಚುವರಿಯಾಗಿ ಬಳಸಿಕೊಳ್ಳಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

SCROLL FOR NEXT