ಸಂಗ್ರಹ ಚಿತ್ರ 
ದೇಶ

ಸುಂಜುವಾನ್ ದಾಳಿ: 7 ತಿಂಗಳ ಹಿಂದೆಯೇ ಪಾಕ್'ನಿಂದ ಭಾರತಕ್ಕೆ ಬಂದಿದ್ದ ಉಗ್ರರು

ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಪಾಕಿಸ್ತಾನದಿಂದ 7 ತಿಂಗಳ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ...

ನವದೆಹಲಿ: ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಪಾಕಿಸ್ತಾನದಿಂದ 7 ತಿಂಗಳ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 
ಸುಂಜುವಾನ್ ದಾಳಿ ಕುರಿತಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಇದೀಗ ಪ್ರಾಥಮಿಕ ವರದಿಯನ್ನು ಸಿದ್ಧಪಡಿಸಿದ್ದು, ವರದಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಅವಿತುಕೊಂಡು ದಾಳಿ ನಡೆಸಿದ್ದ ಮೂವರು ಉಗ್ರರು 7 ತಿಂಗಳ ಹಿಂದೆಯೇ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದರು. ಬಳಿಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಎಂದು ತಿಳಿಸಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ. 
ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ಫೆ.10 ರಂದು ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ 6 ಯೋಧರು ಹುತಾತ್ಮರಾಗಿದ್ದರು. ಅಲ್ಲದೆ, ಓರ್ವ ನಾಗರೀಕ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿದ್ದವು. 
ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು. 
ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಪಾಕಿಸ್ತಾನದ ಗಡಿ ದಾಟಿದ್ದ ಉಗ್ರರು ಭಾರತದ ಪ್ರವೇಶಿಸಿದ್ದರು ಎಂದು ಮೂಲಗಳು ತಿಳಿಸಿವೆ. 
ದಾಳಿ ಕುರಿತಂತೆ ಅಧಿಕಾರಿಗಳು ಆಳವಾಗಿ ತನಿಖೆ ನಡೆಸುತ್ತಿದ್ದು, ವರದಿ ಸಿದ್ಧಪಡಿಸಿದ ಬಳಿಕ ಸೇನಾಧಿಕಾರಿಗಳು ವರದಿಯನ್ನು ಪರಿಶೀಲನೆ ನಡೆಸುತ್ತಾರೆ. ಇಂತಹ ದಾಳಿಗಳು ಮರುಕಳಿಸದಂತೆ ಕೂಡಲೇ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದ್ದು, ಗಡಿಯಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದರೆ, ದಿಟ್ಟ ಉತ್ತರ ನೀಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!