ಕೇಂದ್ರ ಸಚಿವೆ ಮನೇಕಾ ಗಾಂಧಿ 
ದೇಶ

ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಮನೇಕಾ ಗಾಂಧಿ: ವಿಡಿಯೋ ವೈರಲ್

ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿಯೊಬ್ಬರನ್ನು ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ...

ಬರೇಲಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿಯೊಬ್ಬರನ್ನು ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 
ಉತ್ತರಪ್ರದೇಶದ ಬರೇಲಿಯಲ್ಲಿ ಸಾರ್ವಜನಿಕ ಸಭೆಯನ್ನು ನಡೆಸುತ್ತಿದ್ದ ವೇಲೆ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಮನೇಕಾ ಅವರು ಎಲ್ಲರ ಸಮ್ಮುಖದಲ್ಲಿಯೇ ಅಧಿಕಾರಿನ್ನು ತರಾಟೆಗೆ ತೆಗೆದೆಕೊಂಡಿದ್ದಾರೆ. 
ಉತ್ತರಪ್ರದೇಶದ ಬಹೇರಿಯಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿದ್ದ ವೇಳೆ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಇದರಿಂದ ಕೆಂಡಾಮಂಡಲರಾದ ಮೇನಕಾ ಎಲ್ಲರೆದುರೇ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಮನೇಕಾ ಅವರು, 2019ರ ಲೋಕಸಭಾ ಚುನಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. 
ಉತ್ತಮ ಆಡಳಿತದ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲಾಗುತ್ತದೆ. ಮೂರು ಪ್ರಮುಖ ವಲಯಗಳ ಮೇಲೆ ಗಮನ ಹರಿಸಲಾಗಿದೆ. ಉತ್ತಮ ರಸ್ತೆಗಳು, ವಿದ್ಯುದೀಕರಣ ಮತ್ತು ಪ್ರತೀ ಮನೆಯಲ್ಲಿ ಶೌಚಾಲಯ ಸೌಲಭ್ಯ ಒದಗಿಸುವುದು ನನ್ನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಇದಲ್ಲದೆ, ಸಚಿವೆ ಮನೇಕಾ ಅವರು ಎಲ್ಲಾ ಮನೆಗಳಿಗೂ ವಿದ್ಯುತ್ ಸೌಲಭ್ಯ ನೀಡುವ ಗುರಿಯನ್ನು ಹೊಂದಿರುವ ಸೌಭಾಗ್ಯ ಯೋಜನೆ ಕುರಿತಂತೆಯೂ ಸಭೆಯಲ್ಲಿ ಮಾತನಾಡಿದ್ದಾರೆ. 
ಭ್ರಷ್ಟಾಚಾರ, ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಧೋರಣೆಯನ್ನು ಹೊಂದಿರುವ ಸಚಿವೆ ಮನೇಕಾ ಗಾಂಧಿವರು ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ವೈವಾಹಿಕ ಅತ್ಯಾಚಾರವನ್ನು ಅಪರಾಧ ಪ್ರಕರಣವಾಗಿ ಪರಿಗಣಿಸುವಂತೆ ಆಗ್ರಹಿಸಿ ಸುದ್ದಿಗೆ ಗ್ರಾಸವಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್