ಶೀಲಾ ದೀಕ್ಷಿತ್-ಅಜಯ್ ಮಾಕನ್ 
ದೇಶ

ಅಜಯ್ ಮಾಕನ್ ಅವರ ಕಾರ್ಯಶೈಲಿಯಿಂದ ಕಾಂಗ್ರೆಸ್ ಗೆ ಹಾನಿ:ಶೀಲಾ ದೀಕ್ಷಿತ್

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕನ್ ಅವರ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ....

ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕನ್ ಅವರ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್, ಅವರ ಕೆಲಸದ ಶೈಲಿಯಿಂದಾಗಿ ಪಕ್ಷಕ್ಕೆ ಸಾಕಷ್ಟು ಹಾನಿಯುಂಟಾಗಿದೆ ಎಂದು ಹೇಳಿದ್ದಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷದ ಅಧ್ಯಕ್ಷರು ದಿನವಿಡೀ ಪಕ್ಷಕ್ಕಾಗಿ ದುಡಿಯಬೇಕು, ಎಲ್ಲರೊಂದಿಗೆ ಕುಳಿತು ಮಾತನಾಡಬೇಕು ಮತ್ತು ಎಲ್ಲವನ್ನೂ ತಿಳಿದುಕೊಂಡಿರಬೇಕು. ವಿಷಯವನ್ನು ಸರಿಪಡಿಸುವುದು ಅಗತ್ಯವಿದೆ ಎಂದು ಹೇಳಿದರೆ ಒಳ್ಳೆಯ ಸಂಗತಿ.ಅವರೇನು ಮಾಡುತ್ತಾರೆ ನೋಡೋಣ. ಅವರ ಕೆಲಸದ ಶೈಲಿ ಕಾಂಗ್ರೆಸ್ ಗೆ ಭಾರೀ ನಷ್ಟವನ್ನುಂಟುಮಾಡಿದೆ ಎಂದರು.
ಮಾಜಿ ದೆಹಲಿ ಸಚಿವ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ, ಅವರ ಬಗ್ಗೆ ಶ್ಲಾಘಿಸಿದ ಶೀಲಾ ದೀಕ್ಷಿತ್, ಕಾಂಗ್ರೆಸ್ ತತ್ವಗಳನ್ನು ಒಪ್ಪಿಕೊಂಡವರು ಬಿಜೆಪಿ ಜೊತೆ ಇರುವುದು ಕಷ್ಟಸಾಧ್ಯ, ಮತ್ತೆ ಕಾಂಗ್ರೆಸ್ ಗೆ ಬರಲು ಇಚ್ಛಿಸುತ್ತಾರೆ ಎಂದರು.
ಕಳೆದ ವರ್ಷ ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದ ಲವ್ಲಿ ಕಳೆದ ಶನಿವಾರ ಕಾಂಗ್ರೆಸ್ ಸೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video