ಸಂಗ್ರಹ ಚಿತ್ರ 
ದೇಶ

ಹಣ, ಹೆಸರಿಗಾಗಿ ಕಮಲ್ ಹಾಸನ್ ರಾಜಕೀಯಕ್ಕೆ ಬಂದಿಲ್ಲ: ಭೇಟಿ ಬಳಿಕ ರಜನಿಕಾಂತ್ ಹೇಳಿಕೆ

ನಟ ಕಮಲ್ ಹಾಸನ್ ಹಣ ಅಥವಾ ಹೆಸರಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಜನರಿಗೆ ಸೇವೆ ಮಾಡಲು ಬಯಸುತ್ತಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈ: ನಟ ಕಮಲ್ ಹಾಸನ್ ಹಣ ಅಥವಾ ಹೆಸರಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಜನರಿಗೆ ಸೇವೆ ಮಾಡಲು ಬಯಸುತ್ತಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ಭಾನುವಾರ ನಟ ಕಮಲ್ ಹಾಸನ್ ಅವರು ನಟ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿ ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದರು. ಚೆನ್ನೈನ ಪೋಯಸ್ ಗಾರ್ಡನ್ ನಿವಾಸಕ್ಕೆ ಇಂದು ಆಗಮಿಸಿದ್ದ ನಟ ಕಮಲ್  ಹಾಸನ್ ಅವರು, ಸುಮಾರು ವಿಚಾರಗಳು ಕುರಿತು ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಜನಿಕಾಂತ್ ಕಮಲ್ ಹಾಸನ್ ಹಣ, ಹೆಸರು ಗಳಿಸಲು ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಅವರು  ಜನಸೇವೆ ಮಾಡಬೇಕು ಎಂದು ಬಯಸಿದ್ದಾರೆ. ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ನಟ ಕಮಲ್ ಹಾಸನ್ ರಾಜಕೀಯ ವಿಚಾರದ ಕುರಿತು ಮಾತನಾಡಲು ನಿರಾಕರಿಸಿದರು. ಅಂತೆಯೇ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ಕಾಲವೇ ಇದಕ್ಕೆ ಉತ್ತರ ನೀಡಲಿದೆ  ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ನಟ ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದ ನಟ ಕಮಲ್ ಹಾಸನ್, ರಜನಿಕಾಂತ್ ಅವರು ಕೇಸರಿಬಣ್ಣದ ಪರ ನಿಲುವು ಹೊಂದುವುದಿಲ್ಲ ಎಂಬ ಭರವಸೆ ಇದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT