ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಹಗರಣದ ಬಗ್ಗೆ ಮೌನ ಮುರಿಯುವಂತೆ ಆಗ್ರಹಿಸಿದ್ದಾರೆ.
ವಂಚನೆ ಪ್ರಕರಣದ ಅಪರಾಧಿಗಳಂತೆ ವರ್ತಿಸುವುದನ್ನು ಬಿಡಿ, ನಡೆದಿರುವ ಹಗರಣದ ಬಗ್ಗೆ ಮಾತನಾಡಿ ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿ ಹಾಗೂ ಅರುಣ್ ಜೇಟ್ಲಿ ಅವರಿಗೆ ಹೇಳಿದ್ದಾರೆ.
"ಪರೀಕ್ಷೆಗಳನ್ನು ಎದುರಿಸುವುದು ಹೇಗೆ ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ 2 ಗಂಟೆ ಭಾಷಣ ಮಾಡುತ್ತಾರೆ, ಆದರೆ 22,000 ಕೋಟಿ ರೂಪಾಯಿಗಳ ಬ್ಯಾಂಕಿಂಗ್ ಹಗರಣದ ಬಗ್ಗೆ 2 ನಿಮಿಷವೂ ಮಾತನಾಡುವುದಿಲ್ಲ, ಪ್ರಧಾನಿ ಮೋದಿಯಷ್ಟೇ ಅಲ್ಲ, ವಿತ್ತ ಸಚಿವರೂ ಸಹ ಈ ವಿಷಯದ ಬಗ್ಗೆ ಮಾತನಾಡುವುದಿಲ್ಲ, ನೀವು ಅಪರಾಧಿಗಳೆಂಬಂತೆ ವರ್ತಿಸುವುದನ್ನು ಬಿಡಿ ಬೆಂದು ರಾಹುಲ್ ಪ್ರಧಾನಿ ಹಾಗೂ ವಿತ್ತ ಸಚಿವರ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಿಲ್ಲ, ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆಯನ್ನು ಹಾಳುಗೆಡವುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.