ಲೀಲಾವತಿ ಆಸ್ಪತ್ರೆ ಪತ್ರಿಕಾ ಪ್ರಕಟಣೆ
ಮುಂಬೈ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕಳೆದ ಗುರುವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಆಗಮಿಸಿದ್ದರು. ಇದನ್ನೇ ಕೇಂದ್ರವಾಗಿರಿಸಿಕೊಂಡು ಕೆಲ ಮಾಧ್ಯಮಗಳು ಪರಿಕ್ಕರ್ ಅವರುನಾಲ್ಕನೇ ಹಂತದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿದ್ದವು. ಇದೀಗ ಈ ಎಲ್ಲ ಊಹೋಪೋಹಗಳಿಗೆ ಮುಂಬೈನ ಲೀಲಾವತಿ ಆಸ್ಪತ್ರೆ ಆಡಳಿತ ಮಂಡಳಿ ತೆರೆ ಎಳೆದಿದ್ದು, ಪರಿಕ್ಕರ್ ಆರೋಗ್ಯವಾಗಿದ್ದು, ಸಾಮಾನ್ಯ ಚೆಕ್ ಅಪ್ ಗಾಗಿ ಆಸ್ಪತ್ರೆ ಆಗಮಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ಚಿಕಿತ್ಸೆ ಉತ್ತಮವಾದಿ ಸ್ಪಂದಿಸುತ್ತಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
ಇನ್ನು ಮುಂಬೈಗೆ ಆಗಮಿಸುವುದಕ್ಕೂ ಮುನ್ನ ಪರಿಕ್ಕರ್ ಅವರು ಹೊಟ್ಟೆನೋವಿನಿಂದ ಬಳಲಿ ಗೋವಾದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಆಸ್ಪತ್ರೆಯಲ್ಲಿ ಗೋವಾ ಸಿಎಂರನ್ನು ಭೇಟಿಯಾದ ಪ್ರಧಾನಿ ಮೋದಿ
ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಮನೋಹರ್ ಪಾರಿಕ್ಕರ್ ರನ್ನು ಪ್ರಧಾನಿ ನರೇಂದ್ರ ಮೋದಿ ರವಿವಾರ ಭೇಟಿಯಾದರು. ಹೊಟ್ಟೆನೋವಿನಿಂದ ಬಳಲುತ್ತಿದ್ದ ಪಾರಿಕ್ಕರ್ ರನ್ನು ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರ ಸಲಹೆಯಂತೆ ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು.