ಪ್ರಕಾಶ್ ಜರ್ವಾಲ್ 
ದೇಶ

ದೆಹಲಿ ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಶಾಸಕ ಪ್ರಕಾಶ್ ಜರ್ವಾಲ್ ಬಂಧನ

ದೆಹಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ...

ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ ಪ್ರಕಾಶ್ ಜರ್ವಾಲ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಕಾರ್ಯದರ್ಶಿಯ ದೂರಿನ ಆಧಾರದ ಮೇಲೆ ಎಎಪಿ ಶಾಸಕ ಜರ್ವಾಲ್ ಮತ್ತು ಇತರರ ವಿರುದ್ಧ ಐಪಿಸಿ  ಸೆಕ್ಷನ್ 353, 323,  34, 186, 323, 342, 504, 506 120ಬಿ ಅಡಿ ದೆಹಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಬಾಗಿಲು ಹಾಕಿದ ಎಎಪಿ ಶಾಸಕರೊಬ್ಬರು, ಶಾಸಕ ಅಮಾನತುಲ್ಲಾ ಖಾನ್ ಹಾಗೂ ಮತ್ತೊಬ್ಬ ಶಾಸಕನ ಮಧ್ಯೆ ಸೋಫಾ ಮೇಲೆ ಕುಳಿತುಕೊಳ್ಳುವಂತೆ ಗದರಿಸಿದರು. ಬಳಿಕ ಟಿವಿ ಜಾಹೀರಾತು ಬಿಡುಗಡೆ ವಿಳಂಬವಾಗುತ್ತಿರುವ ಕುರಿತು ಶಾಸಕರ ಪ್ರಶ್ನೆಗೆ ಉತ್ತರಿಸುವಂತೆ ನನಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೂಚಿಸಿದರು. ಅಧಿಕಾರಿಗಳು ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸುತ್ತಿದ್ದಾರೆ ಎಂದು ತಾವು ವಿವರಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಮುಖ್ಯ ಕಾರ್ಯದರ್ಶಿಯ ಆರೋಪವನ್ನು ಆಮ್ ಆದ್ಮಿ ಪಕ್ಷ ಸ್ಪಷ್ಟವಾಗಿ ತಳ್ಳಿಹಾಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!