ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ಹೊನ್ನಾವರ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನಡೆಸಲಾಗುತ್ತಿರುವ ರಾಜ್ಯ ಪ್ರವಾಸವನ್ನು ಅಂತ್ಯಗೊಳಿಸಿದ್ದಾರೆಂದು ತಿಳಿದುಬಂದಿದೆ.
ಕೋಮು ಗಲಭೆಯಲ್ಲಿ ಮೃತಪಟ್ಟ ಪರೇಶ್ ಮೇಸ್ತ ಮನೆಗೆ ನಿನ್ನೆ ಭೇಟಿ ನೀಡಿದ ಅಮಿತ್ ಶಾ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಅಮಿತ್ ಶಾ ಅವರಗೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಶಾಸಕ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರೂ ಕೂಡ ಪರೇಶ್ ಮನೆಗೆ ಭೇಟಿ ನೀಡಿ 20 ನಿಮಿಗಳ ಕಾಲ ಪರೇಶ್ ಅವರ ತಂದೆಯೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪರೇಶ್ ಅವರ ಸಾವಿನ ತನಿಖೆಯನ್ನು ಸಿಬಿಐ ನಡೆಸಲಿದೆ ಎಂದು ಭರವಸೆ ನೀಡಿದರು.
ಈ ನಡುವೆ ಅಮಿತ್ ಶಾ ಅವರಿಗೆ ಅತೀವ್ರ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಜ್ಯ ಪ್ರವಾಸವನ್ನು ಮಧ್ಯದಲ್ಲಿಯೇ ಅಂತಿಮ ಗೊಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.
ಅಮಿತ್ ಆವರ ಗೋಕರ್ಣ ಹಾಗೂ ಕುಮಟಾ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಬೇಕಿತ್ತು. ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಅಂತಿಮಗೊಳಿಸಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಭಾರೀ ನಿರಾಸೆಯನ್ನುಂಟು ಮಾಡಿದೆ.