ಅಪರಿಚಿತರಿಂದ ಗುಂಡಿಟ್ಟು ಉದ್ಯಮಿ ಹತ್ಯೆ
ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ...
ಗುವಾಹಟಿ: ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ.
ರಾತ್ರಿ ಸುಮಾರು 8.30 ವೇಳೆಗೆ ಅಂಗಡಿ ಮುಚ್ಚಿ ಮನೆಗೆ ವಾಪಸಾಗುತ್ತಿದ್ದ ಹೇಮಂತ್ ಚೌರಾಸಿಯಾ ಎಂಬುವರ ಮೇಲೆ ಕೈಲಾಸನಗರ ಬಳಿ ಬೈಕ್ ನಲ್ಲಿ ಬಂದ ಅಪರಿಚಿತರು ತೀರಾ ಸಮೀಪದಿಂದ ಗುಂಡು ಹಾರಿಸಿದ್ದಾರೆ. ನಂತರ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಕೂಡಲೇ ಹೇಮಂತ್ ಅವರನ್ನು ದಿಸ್ ಪುರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತ ಪಟ್ಟಿದ್ದರು, ಇನ್ನೂ ಘಟನೆ ನಡೆದ ಸ್ಥಳದಿಂದ ಪೊಲೀಸರು 9ಸಸ ಪಿಸ್ತೂಲ್ ವಶ ಪಡಿಸಿಕೊಂಡಿದ್ದಾರೆ, ಜೊತೆಗೆ 1 ಲಕ್ಷ ರು ಹಣವಿದ್ದ ಬ್ಯಾಗ್ ಕೂಡ ಪೊಲೀಸರ ವಶದಲ್ಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.