ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (ಸಂಗ್ರಹ ಚಿತ್ರ) 
ದೇಶ

ಎಐಯುಡಿಎಫ್ ಕುರಿತು ಹೇಳಿಕೆ: ರಾಜಕೀಯ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಬೇಡಿ- ಸೇನಾ ಮುಖ್ಯಸ್ಥ ರಾವತ್'ಗೆ ಓವೈಸಿ

ಅಸ್ಸಾಂನ ಕೆಲ ಪ್ರದೇಶಗಳಲ್ಲಿ ಎಐಯುಡಿಎಫ್ ಸಂಘಟನೆ ವೇಗವಾಗಿ ಬೆಳೆಯುತ್ತಿದೆ ಎಂಬ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೇಳಿಕೆಗೆ ತೀವ್ರವಾಗಿ ಕಿಡಿಕಾರಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ರಾಜಕೀಯ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಗುರುವಾರ ಎಚ್ಚರಿಕೆ ನೀಡಿದ್ದಾರೆ...

ನವದೆಹಲಿ: ಅಸ್ಸಾಂನ ಕೆಲ ಪ್ರದೇಶಗಳಲ್ಲಿ ಎಐಯುಡಿಎಫ್ ಸಂಘಟನೆ ವೇಗವಾಗಿ ಬೆಳೆಯುತ್ತಿದೆ ಎಂಬ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೇಳಿಕೆಗೆ ತೀವ್ರವಾಗಿ ಕಿಡಿಕಾರಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ರಾಜಕೀಯ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಗುರುವಾರ ಎಚ್ಚರಿಕೆ ನೀಡಿದ್ದಾರೆ. 
ರಾವತ್ ಅವರ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಓವೈಸಿ, ರಾವತ್ ಅವರು ದೇಶಗ ಗಡಿ ಕಾಯುವ ಕೆಲಸ ಮಾಡಬೇಕೇ ಹೊರತು ರಾಜಕೀಯ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ. 
ದೇಶದ ಪ್ರಜಾಸತ್ತೆ ಮತ್ತು ಸಂವಿಧಾನ ರಾಜಕೀಯ ಪಕ್ಷಗಳಿಗೆ ಅವಕಾಶವನ್ನು ಕಲ್ಪಿಸುತ್ತದೆ. ಸೇನೆ ಎಂದಿಗೂ ಚುನಾಯಿತ ಪೌರ ನಾಯಕತ್ವದಡಿ ಕೆಲಸ ಮಾಡಬೇಕಾಗುತ್ತದೆ ಎಂದು ರಾವತ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ರಾವತ್ ಅವರು, "ಭಾರತದ ಮೇಲೆ ಚೀನಾ ನೆರವಿನೊಂದಿಗೆ  ಪಾಕಿಸ್ತಾನ ಯೋಜಿತ ಉಪಾಯದೊಂದಿಗೆ ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತಕ್ಕೆ ರವಾನೆ ಮಾಡುತ್ತಿದೆ. ಇದರಿಂದ ದೇಶದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ನಾನು ಗಮನಿಸಿದಂತೆ ಎಐಯುಡಿಎಫ್ ಎಂಬ ಸಂಘಟನೆ  1980ರಲ್ಲಿ ಬಿಜೆಪಿ ಬೆಳೆದ ವೇಗಕ್ಕಿಂತಲೂ  ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT