ದೇಶ

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್

Manjula VN
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿರುವ ಪಾಕಿಸ್ತಾನ. ಉರಿ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 
ಉರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಈ ನಡುವೆ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಗುಂಡುಗಳ ಮೊರೆತ ಶಬ್ಧಗಳು ಕೇಳಿಬಂದಿದ್ದು, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ. 
SCROLL FOR NEXT