ಬಂಡಿಪೋರಾದಲ್ಲಿ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಗಾಯಗೊಂಡಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಬಂಡಿಪೋರಾದ ಪರಿಬಾಲ್ ಗ್ರಾಮದಲ್ಲಿ ಗುಂಡಿನ ಮೊರೆತೆದ ಶಬ್ಧ ಕೇಳಿಬಂದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದರು. ಹಾಜಿನ್ ಪ್ರದೇಶದ ಬಳಿ ಭದ್ರತಾ ಪಡೆಗಳು ಬರುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆಂದು ತಿಳಿದುಬಂದಿದೆ.
ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೆಡೆ ಸೇನಾಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದರೆ, ಮತ್ತೊಂದೆಡೆ ಗ್ರಾಮದಲ್ಲಿರುವ ಯುವಕರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಕಲ್ಲು ತೂರಾಟವನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹರಸಾಹಸ ಪಡುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.