ಪಾಕ್ ನ ಬಿಎಟಿ ಗುಂಡಿನ ದಾಳಿಗೆ ಭಾರತೀಯ ಯೋಧರಿಂದ ತೀಕ್ಷ್ಣ ಪ್ರತ್ಯುತ್ತರ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ನಿರಂತರ ಪುಂಡಾಟಿಕೆ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತ್ಯುತ್ತರ ನೀಡಿದೆ...
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ನಿರಂತರ ಪುಂಡಾಟಿಕೆ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತ್ಯುತ್ತರ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ತಂಗ್ದಾರ್ ಸೆಕ್ಟರ್ ಬಳಿ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಂ ದಾಳಿಗೆ ಮುಂದಾಗಿತ್ತು ಈ ವೇಳೆ ಎಚ್ಚೆತ ಬಾರತೀಯ ಸೇನೆ ಬಿಎಟಿ ದಾಳಿಯನ್ನು ವಿಫಲಗೊಳಿಸಿರುವುದಾಗಿ ಹೇಳಿದೆ.
ಕಳೆದ ರಾತ್ರಿ ನಡೆದ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಟಿಗೆ ಭಾರತೀಯ ಸೇನೆ ಯೋಧರು ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.