ಮುಖ್ಯಮಂತ್ರಿಗಳ ನಿವಾಸದ ಬಳಿ ಪೊಲೀಸರು 
ದೇಶ

ಸಿಎಂ ಕೇಜ್ರಿವಾಲ್ ಮನೆ ಸಿಸಿಟಿವಿಯ ಹಾರ್ಡ್ ಡಿಸ್ಕ್ ಜಪ್ತಿ; ಹಲ್ಲೆ ನಡೆದ ಕೊಠಡಿಯಲ್ಲಿ ಸಿಸಿಟಿವಿ ಇರಲಿಲ್ಲ

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ...

ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ದೆಹಲಿ ಪೊಲೀಸರು, ಅವರ ಮನೆಯ ಸಿಸಿಟಿವಿಯ ಹಾರ್ಡ್ ಡಿಸ್ಕ್ ಅನ್ನು ಜಪ್ತಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಮನೆಯ ಸಿಸಿಟಿವಿಯ ದೃಶ್ಯ ನೀಡುವಂತೆ ಮನವಿ ಮಾಡಿದ್ದೇವೆ. ಆದರೆ ಮನವಿ ಸ್ಪಂದಿಸದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ಅಳವಡಿಸಲಾಗಿದ್ದ ಒಟ್ಟು 21 ಸಿಸಿಟಿವಿಗಳನ್ನು ಮತ್ತು ಹಾರ್ಡ್ ಡಿಸ್ಕ್ ಅನ್ನು ಪರಿಶೀಲಿಸಲಾಗಿದೆ. ಆದರೆ ಸಿಸಿಟಿವಿ ವಿಡಿಯೋವನ್ನು ತಿರುಚಿದ್ದಾರೋ ಅಥವಾ ಇಲ್ಲವೇ ಎಂಬುದು ವಿಧಿ ವಿಜ್ಞಾನ ಪರೀಕ್ಷೆಯ ನಂತರವೇ ತಿಳಿಯಲಿದೆ ಎಂದು ಉತ್ತರ ವಲಯ ಡಿಸಿಪಿ ಹರೇಂದ್ರ ಸಿಂಗ್ ಅವರು ಹೇಳಿದ್ದಾರೆ.
ಫೆ.20ರಂದು ಸಿಸಿಟಿವಿ ದೃಶ್ಯ ನೀಡುವಂತೆ ಮುಖ್ಯಮಂತ್ರಿಗಳ ನಿವಾಸದ ಸಿಬ್ಬಂದಿಗೆ ನಾವು ಮನವಿ ಮಾಡಿದ್ದೇವು. ಆದರೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ ನಾವೇ ದಾಳಿ ನಡೆಸಿ ಜಪ್ತಿ ಮಾಡಿದ್ದೇವೆ ಎಂದರು.
ಈ ಮಧ್ಯೆ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ ಕೊಠಡಿಯಲ್ಲಿ ಸಿಸಿಟಿವಿ ಇಲ್ಲ ಎನ್ನಲಾಗುತ್ತಿದ್ದು, ಕಾರಿಡಾರ್ ನಲ್ಲಿ ಅಳವಡಿಸಿದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಮುಖ್ಯಮಂತ್ರಿಗಳ ನಿವಾಸದಲ್ಲಿರುವ 21 ಸಿಸಿಟಿವಿಗಳ ಪೈಕಿ ಏಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಸಿಸಿಟಿವಿ ಇಲ್ಲ. ಆದರೆ ಘಟನೆ ನಂತರದ ವ್ಯಕ್ತಿಗಳ ಚಲನವಲನವನ್ನು ನಾವು ಗುರುತಿಸುತ್ತೇವೆ ಎಂದು ಹೇಳಿದ್ದಾರೆ.
ಫೆ.19ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದ ವೇಳೆ ತಮ್ಮ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಇಂದು ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT