ಸಂಗ್ರಹ ಚಿತ್ರ 
ದೇಶ

ನಿವಾಸದಲ್ಲಿ ಪೊಲೀಸ್ ಶೋಧ; ಜಸ್ಟಿಸ್ ಲೋಯಾ ಹತ್ಯೆ ಕುರಿತು ಅಮಿತ್ ಶಾ ವಿಚಾರಣೆ ಯಾವಾಗ ಎಂದ ಕೇಜ್ರಿವಾಲ್

ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಂಗ್ರಹಿಸುತ್ತಿರುವ ಪೊಲೀಸರ ಕ್ರಮಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಂಗ್ರಹಿಸುತ್ತಿರುವ ಪೊಲೀಸರ ಕ್ರಮಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ಕಪಾಳಕ್ಕೆ 2 ಏಟು ಹೊಡೆದಿದ್ದಕ್ಕೇ 70 ಮಂದಿ ಪೊಲೀಸರಿಂದ ಮನೆಯ ಮೂಲೆ ಮೂಲೆಯಲ್ಲೂ ತೀವ್ರ ತಪಾಸಣೆ.. ತುಂಬಾ ಸಂತೋಷ.. ಆದರೆ ಜಸ್ಟಿಸ್ ಲೋಯಾ  ಹತ್ಯೆ ಸಂಬಂಧ ಅಮಿತ್ ಶಾ ವಿಚಾರಣೆ ಯಾವಾಗ ನಡೆಯುತ್ತದೆ ಎಂದು ಪ್ರಶ್ನಿಸಿದ್ದಾರೆ. ಅಂತೆಯೇ ತಮ್ಮ ಟ್ವೀಟ್ ಮುಂದುವರೆಸಿರುವ ಕೇಜ್ರಿವಾಲ್, ತಮ್ಮ ಸಂಪುಟದ ಸಚಿವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಬಳಿ ಭೇಟಿಗಾಗಿ  ಸಮಯ ಕೇಳಿದ್ದು, ಎಲ್ಲ ಅಧಿಕಾರಿಗಳು ಆಪ್ ಸರ್ಕಾರದೊಂದಿಗೆ ಕೆಲಸ ಮಾಡುವ ಕುರಿತು ಸೂಚನೆ ನೀಡುವಂತೆ ಕೇಳಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಮಂಗಳವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಆಪ್ ಶಾಸಕರು ಹಲ್ಲೆ ಮಾಡಿದ್ದರು. ಜಾಹಿರಾತು ನೀಡಿಕೆ ಸಂಬಂಧ ಅಂಶು ಪ್ರಕಾಶ್ ಅವರ  ವಿರುದ್ಧ ಆಕ್ರೋಶಗೊಂಡಿದ್ದ ಶಾಸಕರು ಅವರ ಮೇಲೆ ಹಲ್ಲೆ ಮಾಡಿದ್ದರು. ಈ ವೇಳೆ ಅಂಶು ಪ್ರಕಾಶ್ ಅವರ ತುಟಿಗೆ ಗಾಯವಾಗಿತ್ತು. 
ಈ ಬಗ್ಗೆ ಅಂಶು ಪ್ರಕಾಶ್ ಅವರು ದೆಹಲಿ ಲೆಫ್ಟೆನೆಂಟ್ ಗವರ್ನರ್ ಹಾಗೂ ದೆಹಲಿ ಪೊಲೀಸ್  ಆಯುಕ್ತರಿಗೆ ದೂರು ನೀಡಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಸರ್ಕಾರಿ ಅಧಿಕಾರಿಗಳ ಒಕ್ಕೂಟ ಆಪ್ ಸರ್ಕಾರದೊಂದಿಗೆ ಕೆಲಸ ಮಾಡುವುದಿಲ್ಲ ಎಂದು ಬಹಿಷ್ಕಾರ ಹಾಕಿದ್ದು, ಇದೀಗ ಸರ್ಕಾರಿ ಅಧಿಕಾರಿಗಳು ಕಾರ್ಯ  ನಿರ್ವಹಿಸುವಂತೆ ಸಿಎಂ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಮನವಿ ಮಾಡಿಕೊಳ್ಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!