ದೇಶ

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಆಪ್ ಶಾಸಕರ ಜಾಮೀನು ಅರ್ಜಿ ವಜಾ

Lingaraj Badiger
ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕರಾದ ಅಮನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರ ಜಾಮೀನು ಅರ್ಜಿಯನ್ನು ಶುಕ್ರವಾರ ದೆಹಲಿ ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ಆಪ್ ಶಾಸಕರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಮೆಟ್ರೊಪೋಲಿಟನ್ ಮ್ಯಾಜಿಸ್ಟ್ರೇಟ್ ಶೆಫಲ್ ಬರ್ನಾಲ ಟಂಡನ್ ಅವರು ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿದ್ದಾರೆ.
ನಿನ್ನೆ ಮೆಟ್ರೊಪೋಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿ ಆಪ್ ಶಾಸಕರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
ಫೆ.19ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದ ವೇಳೆ ತಮ್ಮ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.
SCROLL FOR NEXT