ಜಮ್ಮು-ಕಾಶ್ಮೀರ: ಪಾಕಿಸ್ತಾನಿ ಪೋಸ್ಟ್ ನ್ನು ಧ್ವಂಸಗೊಳಿಸಿದ ಭಾರತೀಯ ಸೇನೆ
ಗಡಿ ಭಾಗದಲ್ಲಿ ಪುಂಡಾಟಿಕೆ ನಡೆಸುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಪೋಸ್ಟ್ ನ್ನು ಧ್ವಂಸಗೊಳಿಸಿದೆ.
ಜಮ್ಮು: ಗಡಿ ಭಾಗದಲ್ಲಿ ಪುಂಡಾಟಿಕೆ ನಡೆಸುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಪೋಸ್ಟ್ ನ್ನು ಧ್ವಂಸಗೊಳಿಸಿದೆ.
ಕದನ ವಿರಾಮ ಉಲ್ಲಂಘನೆಯಲ್ಲಿ ಸಹಕಾರಿಯಾಗಿದ್ದ ಪೋಸ್ಟ್ ನ್ನು ಭಾರತೀಯ ಸೇನೆ ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ಮೆಂಧಾರ್ ಸೆಕ್ಟರ್ ನಲ್ಲಿ ಈ ಪೋಸ್ಟ್ ಮೂಲಕವೇ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ನಡೆಯುತ್ತಿತ್ತು ಎಂದು ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.