ಸುನಂದಾ ಪುಷ್ಕರ್ 
ದೇಶ

ಸುನಂದಾ ಪುಷ್ಕರ್ ಪ್ರಕರಣ: ದೆಹಲಿ ಪೋಲೀಸರಿಗೆ ಸುಪ್ರೀಂ ಕೋರ್ಟ್ ನೋಟೀಸ್

ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ.....

ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ  ಪುಷ್ಕರ್ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ  ಸಂಬಂಧ ಪ್ರತಿಕ್ರಿಯೆ ನೀಡುವಂತೆ  ದೆಹಲಿ ಪೋಲೀಸರಿಗೆ ಸರ್ವೋಚ್ಚ ನ್ಯಾಯಾಲಯವು ಮನವಿ ಮಾಡಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ಅವರನ್ನೊಳಗೊಂಡ ಪೀಠವು ದೆಹಲಿ ಪೋಲೀಸರಿಗೆ ನೋಟೀಸ್ ನೀಡಿದೆ. "ಪೋಲೀಸರ ಕಾರ್ಯನಿರ್ವಹಣೆಯ ಪ್ರಶ್ನೆ ಮುಂದಿಟ್ಟು ನೋಟೀಸ್ ನೀಡಲಾಗಿದೆ" ಎಂದು ಪೀಠ ಅಭಿಪ್ರಾಯಪಟ್ಟಿದೆ.
ಪುಷ್ಕರ್ ಸಾವಿನ ತನಿಖೆಯನ್ನು  ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸಬೇಕೆಂದು ಸ್ವಾಮಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ನ್ಯಾಯಾಲಯವು ಅ. 26ರಂದು ತಳ್ಳಿ ಹಾಕಿತ್ತು. ನ್ಯಾಯಾಲಯದ ಈ ನಿಲುವನ್ನು ಪ್ರಶ್ನಿಸಿ ಸ್ವಾಮಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಜನವರಿ 17, 2014ರಲ್ಲಿ ದೆಹಲಿಯ ಪಂಚತಾರಾ ಹೋಟೆಲ್ ಒಂದರಲ್ಲಿ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢವಾಗಿ ಸಾವಿಗೀಡಾಗಿದ್ದರು. ಇವರ ಸಾವಿನ ತನಿಖೆ ನಡೆಸುವಂತೆ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಳೆದ ವರ್ಷ ದೆಹಲಿ ಹೈಕೋರ್ಟ್ ತಳ್ಳಿ ಹಾಕಿತ್ತು. ಸ್ವಾಮಿ ಅವರ ಅರ್ಜಿ ರಾಜಕೀಯ ಹಿತಾಸಕ್ತಿಯಿಂದ ಕೂಡಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT