ಕೇರಳದಲ್ಲಿ ಅಮಾನವೀಯ ಘಟನೆ: ಕಳ್ಳನೆಂದು ಆರೋಪಿಸಿ ಆದಿವಾಸಿ ಯುವಕನಿಗೆ ಥಳಿಸಿ ಕೊಂದ ಸ್ಥಳೀಯರು 
ದೇಶ

ಕೇರಳದಲ್ಲಿ ಅಮಾನವೀಯ ಘಟನೆ: ಕಳ್ಳನೆಂದು ಆರೋಪಿಸಿ ಆದಿವಾಸಿ ಯುವಕನನ್ನು ಥಳಿಸಿ ಕೊಂದ ಸ್ಥಳೀಯರು

ಕಳ್ಳನೆಂದು ತಿಳಿದ ಸ್ಥಳೀಯರು ಆದಿವಾಸಿ ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆಯೊಂದು ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಗ್ರಾಮವೊಂದರಲ್ಲಿ ಗುರುವಾರ ನಡೆದಿದೆ...

ಪಾಲಕ್ಕಾಡ್: ಕಳ್ಳನೆಂದು ತಿಳಿದ ಸ್ಥಳೀಯರು ಆದಿವಾಸಿ ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆಯೊಂದು ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಗ್ರಾಮವೊಂದರಲ್ಲಿ ಗುರುವಾರ ನಡೆದಿದೆ. 
ಗ್ರಾಮದ ಪಕ್ಕದ ಅರಣ್ಯ ಪ್ರದೇಶದಲ್ಲಿ ವಾಸವಾಗಿದ್ದ ಮಧು ಎಂಬ ಆದಿವಾಸಿ ಯುವಕ ಮಾನಸಿಕ ಅಸ್ವಸ್ಥತೆಯಿಂದ ಬಳುತ್ತಿದ್ದು, ಸ್ಥಳೀಯ ಅಂಗಢಿಗಳಿಂದ ಸಾಮಾನೂಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಹೇಳಲಾಗಿದೆ. 
ಇದರಂತೆ ನಿನ್ನೆ ಯುವಕನನ್ನು ಹಿಡಿದ ಕೆಲ ಸ್ಥಳೀಯರು, ಗಂಟೆಗಟ್ಟಲೆ ಆತನಿಗೆ ಹಿಗ್ಗಾಮುಗ್ಗಾ ಥಳಿಸಿ ಹಿಂಸೆ ನೀಡಿದ್ದಾರೆ. ಯುವಕ ಉಟ್ಟಿದ್ದ ಲುಂಗಿಯನ್ನೇ ಬಿಚ್ಚಿ ಆತನ ಕೈಯನ್ನು ಕಟ್ಟಿಹಾಕಿರುವ ಸ್ಥಳೀಯರು ಹಲ್ಲೆಗೂ ಮುನ್ನ ಆತನೊಂದಿಗೆ ಸೆಲ್ಫೀಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿವೆ. 
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಯುವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವೇಳೆ ತೀವ್ರವಾಗಿ ಹಲ್ಲೆಗೊಳಗಾಗಿದ್ದರಿಂದ ಯುವಕ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ಬಳಿಕ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆಂದು ವರದಿಗಳು ತಿಳಿಸಿವೆ. 
ಮಧು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಗಾಲಿಯ ಸರ್ಕಾರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ,ಪ್ರಕರಣ ಸಂಬಂಧ ತನಿಖೆ ಆರಂಭಿಸಲಾಗಿದ್ದು, ಹೊಡೆದಿದ್ದರಿಂದಲೇ ಯುವಕ ಸಾವನ್ನಪ್ಪಿದ್ದಾನೆಂದು ವರದಿ ತಿಳಿದುಬಂದಿದ್ದೇ ಆದರೆ, ಯುವಕನಿಗೆ ಹೊಡೆದ ಪ್ರತೀಯೊಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!