ಸುಷ್ಮಾ ಸ್ವರಾಜ್ ಟ್ರುಡೋ ಭೇಟಿ
ನವದೆಹಲಿ: ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಭಾರತ-ಕೆನಡಾ ದ್ವಿಪಕ್ಷೀಯ ಒಪ್ಪಂದಗಳನ್ನು ಬಲಪಡಿಸುವ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ರವೀಸ್ ಕುಮಾರ್ ಟ್ವೀಟ್ ಮಾಡಿದ್ದಾರೆ, ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಇಬ್ಬರು ನಾಯಕರು ಭೇಟಿ ಮಾಡಿದರು, ಜಸ್ಟಿನ್ ಟ್ರುಡೋ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು, ಅದಾದ ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧೀಜಿ ಸಮಾಧಿಗೆ ಶ್ರದ್ದಾಂಜಲಿ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಜಸ್ಟಿನ್ ಟ್ರುಡೋ ಮತ್ತುವರ ಪತ್ನಿಯನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಭಾರತ ಮತ್ತು ಕೆನಡಾ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಕುರಿತು ತಾವು ಉತ್ಸುಕರಾಗಿದ್ದೇವೆ. ಭಾರತ ಕುರಿತಂತೆ ಟ್ರುಡೋ ಅವರ ಸ್ನೇಹ ಮತ್ತು ಬದ್ಧತೆ ಪ್ರಶಂಸನಾರ್ಹವಾದದ್ದು ಎಂದು ಹೇಳಿದ್ದಾರೆ.
ಉಭಯ ನಾಯಕರು.ವ್ಯಾಪಾರಸ ರಕ್ಷಣೆ, ನಾಗರಿಕ ಪರಮಾಣು ವಾತಾವರಣ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.