ಸಾಂದರ್ಭಿಕ ಚಿತ್ರ 
ದೇಶ

ಉತ್ತರಪ್ರದೇಶ: ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಸಾಮೂಹಿಕ ನಕಲು- 61 ಮಂದಿ ಬಂಧನ

ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಸಾಮೂಹಿಕವಾಗಿ ನಡೆದಿದೆ ಎನ್ನಲಾದ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 61 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಅಲಿಗಢ: ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಸಾಮೂಹಿಕವಾಗಿ ನಡೆದಿದೆ ಎನ್ನಲಾದ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 61 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎಸ್'ಪಿ ಆರ್. ಪಾಂಡೆ ಅವರು, ಉತ್ತರದ ಚೀಟಿಗಳೊಂದಿಗೆಯೇ ಕೆಲ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿದ್ದರೆ, 61 ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ನಕಲು ಮಾಡಿ ಪರೀಕ್ಷೆಯನ್ನು ಬರೆದಿದ್ದರು ಎಂದು ಹೇಳಿದ್ದಾರೆ. 
ಈ ಹಿಂದೆ ಕೂಡ ಇದೇ ರೀತಿ ಬೋರ್ಡ್ ಪರೀಕ್ಷೆ ವೇಳೆ ನಡೆಸಲಾಗಿದ್ದ ಸಾಮೂಹಿಕ ನಕಲು ಪ್ರಕರಣ ಸಾಕಷ್ಟು ಸುದ್ದಿ ಮಾಡಿತ್ತು. ಇದಾದ ಬಳಿಕ ರಾಜ್ಯ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ಯೋಗಿ ಆದಿತ್ಯನಾಥ್ ಅವರು ಪರೀಕ್ಷೆ ನಡೆಯುವ ಸಾಮೂಹಿಕ ನಕಲನ್ನು ತಡೆಯಲು ಕ್ರಮಗಳನ್ನು ಕೈಗೊಂಡಿುದ್ದರು. 
ನ್ಯಾಯಯುತ ಪರೀಕ್ಷೆ ನಡೆಯುವ ಸಲುವಾಗಿ ರಾಜ್ಯ ಸರ್ಕಾರ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಿತ್ತು. ಅಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆ ನಡೆಸಲು ಅಧಿಕಾರಿಗಳನ್ನೂ ನೇಮಕ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!