ನವದೆಹಲಿ: ವಿರಾಟ್ ಕೊಹ್ಲಿ ತಮ್ಮ ಬ್ರ್ಯಾಂಡ್ ಅಂಬಾಸಿಡರ್ ಆಗಿ ಮುಂದುವರೆಯಲಿದ್ದಾರೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಪಷ್ಟನೆ ನೀಡಿದೆ.
11 ಸಾವಿರ ಕೋಟಿ ರೂಪಾಯಿ ವಂಚನೆಗೆ ಗುರಿಯಾಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಟ್ ಸಂಸ್ಥೆ ಪ್ರೈಸ್ ವಾಟರ್ ಹೌಸ್ ಕೂಪರ್ಸ್ ಸಂಸ್ಥೆಯೊಂದಿಗೆ ಸೇರಿ ತನಿಖೆ ನಡೆಸುತ್ತಿದೆ ಎಂಬ ವರದಿಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಳ್ಳಿಹಾಕಿದೆ.
ಇದೇ ವೇಳೆ ಬ್ಯಾಂಕ್ ನ ಗ್ರಾಹಕರಿಗೆ ನಗದು ಡ್ರಾ ಮಾಡಲು ಯಾವುದೇ ಮಿತಿಯನ್ನೂ ಹೇರಿಲ್ಲ, ಬ್ಯಾಂಕ್ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಹೇಳಿದೆ.
ವಿರಾಟ್ ಕೊಹ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ರಾಯಭಾರಿಯಾಗಿ ಮುಂದುವರೆಯುವುದಿಲ್ಲ ಎಂಬ ಊಹಾಪೋಹಗಳು ಉಂಟಾಗಿದ್ದ ಹಿನ್ನೆಲೆಯಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಪಷ್ಟನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics