ಸಂಗ್ರಹ ಚಿತ್ರ 
ದೇಶ

ಕಡತ ಪರಿಶೀಲನೆ, ಕೆಲಸ ಮಾಡದ ಸರ್ಕಾರಿ ಅಧಿಕಾರಿಗಳನ್ನು ಥಳಿಸಿ: ಆಪ್ ಶಾಸಕನ ಹೇಳಿಕೆ

ಕಡತ ಪರಿಶೀಲನೆ ಮಾಡದ ಮತ್ತು ಕೆಲಸ ಮಾಡದ ಸರ್ಕಾರಿ ಅಧಿಕಾರಿಗಳನ್ನು ಥಳಿಸಿ ಎಂದು ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಕಡತ ಪರಿಶೀಲನೆ ಮಾಡದ ಮತ್ತು ಕೆಲಸ ಮಾಡದ ಸರ್ಕಾರಿ ಅಧಿಕಾರಿಗಳನ್ನು ಥಳಿಸಿ ಎಂದು ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿ ಈಗಾಗಲೇ ಸಂಕಷ್ಟದಲ್ಲಿರುವ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಇದೀಗ ಮತ್ತೊಂದು ಹೊಸ ತಲೆನೋವು ಶುರುವಾಗಿದ್ದು, ಆಪ್ ಶಾಸಕ ನರೇಶ್ ಬಲ್ಯಾನ್ ಕೆಲಸ ಮಾಡದ ಸರ್ಕಾರಿ ಅಧಿಕಾರಿಗಳನ್ನು ಥಳಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಇಂತಹ ಅಧಿಕಾರಿಗಳಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಬಲ್ಯಾನ್ ಹೇಳಿದ್ದಾರೆ. 
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಶ್ ಬಲ್ಯಾನ್, ಸರ್ಕಾರಿ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ಮಾಡಲು ಸುಖಾಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ ಏಕೆ? ಏಕೆಂದರೆ ಸರ್ಕಾರಿ ಅಧಿಕಾರಿಗಳು ಕಡತ ಪರಿಶೀಲನೆಗೆ ಲಂಚ ಸ್ವೀಕರಿಸುತ್ತಿದ್ದ ವ್ಯವಸ್ಥೆಯನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಂದ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ಮಾಡದೇ ಸುಖಾಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ. ದೆಹಲಿ ಮುಖ್ಯ ಕಾರ್ಯದರ್ಶಿಗಳೂ ಇಂತಹುದೇ ಕಾರ್ಯದಲ್ಲಿ ತೊಡಗಿದ್ದರು. ಇದೇ ಕಾರಣಕ್ಕೆ ಅವರು ಥಳಿತಕ್ಕೊಳಗಾದರು. 
ಇಂತಹ ಅಧಿಕಾರಿಗಳಿಗೆ ಇದೇ ಸರಿಯಾದ ಶಿಕ್ಷೆ. ಸಾಮಾನ್ಯ ನಾರಿಕರ ಕೆಲಸಗಳಿಗೆ ಅಡ್ಡಿಯಾಗುವ ಯಾವುದೇ ಅಧಿಕಾರಿಗಳೂ ಕೂಡ ಶಿಕ್ಷೆಗೆ ಅರ್ಹರು ಎಂದು ಬಲ್ಯಾನ್ ಹೇಳಿದ್ದಾರೆ. ಬಲ್ಯಾನ್ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೂ ಪ್ರಮುಖ ವಿಚಾರವೆಂದರೆ ಶಾಸಕ ಬಲ್ಯಾನ್ ಈ ಹೇಳಿಕೆ ನೀಡುವಾಗ ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜೇಂದ್ರ ಪಾಲ್ ಗೌತಮ್ ಕೂಡ ವೇದಿಕೆಯಲ್ಲೇ ಇದ್ದರು.
ಇನ್ನು ಈಗಾಗಲೇ ಮುಖ್ಯ ಕಾರ್ಯದರ್ಶಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ನ ಇಬ್ಬರು ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿನ್ನೆಯಷ್ಟೇ ಸುಮಾರು 60-70 ಮಂದಿ ಪೊಲೀಸರು ಘಟನೆ ನಡೆದ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ತೀವ್ರ ಶೋಧ ನಡೆಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!