ಮುಂಬಯಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನನ್ನ ನಾಯಕನೆಂದು ಪರಿಗಣಿಸಬೇಡಿ ಎಂದು ಗುಜರಾತ್ ಪಟಿದಾರ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ.
ಮುಂಬಯಿಯಲ್ಲಿ ಮಾತನಾಡಿದ ಪಟಿದಾರ್ ಅನಾಮತ್ ಆಂದೋಲನ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ತಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲವೆಂದು ಘೋಷಿಸಿದ್ದಾರೆ.
ವಯಕ್ತಿಕವಾಗಿ ರಾಹುಲ್ ಗಾಂಧಿಯನ್ನ ನಾನು ಮೆಚ್ಚುತ್ತೇನೆ, ಆದರೆ ಅವರು ನನ್ನ ನಾಯಕರಲ್ಲ ಎಂದಿರುವ ಹಾರ್ದಿಕ್ ಪಟೇಲ್ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯಕ್ಕೆ ಬರಬೇಕು ಎಂದು ಹೇಳಿದ್ದಾರೆ.
ಒಂದು ವೇಳೆ ಕಾಂಗ್ರೆಸ್ ತನ್ನ ಹೋರಾಟಕ್ಕೆ ಪೂರ್ಣ ಬೆಂಬಲ ನೀಡಿದ್ದರೇ ಗುಜರಾತ್ ನಲ್ಲಿ 99 ಸಿಟುಗಳನ್ನು ಪಡೆಯಬಹುದಾಗಿತ್ತು ಎಂಗು ಹೇಳಿದ್ದಾರೆ, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 77 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 25 ವರ್ಷ ವಯಸ್ಸು ಪೂರ್ಣಗೊಂಡಿರಬೇಕು, ಆದರೆ ನನಗಿನ್ನು 24 ವರ್ಷ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics