ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.
ಹುರಿ ಸೆಕ್ಟರ್ ನಲ್ಲಿ ಅಂತಾರಾಷ್ಟ್ರೀಯ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಮೇಲೆ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ 11-50ರ ಸುಮಾರಿನಲ್ಲಿ ಈ ದಾಳಿ ನಡೆದಿದೆ . ಆದರೆ. ಸಾವು ನೋವಿನ ಕುರಿತು ಯಾವುದೇ ವರದಿಯಾಗಿಲ್ಲ
ಭಾರತದ ಮೇಲೆ ಪದೇ ಪದೇ ಕಾಲು ಕೆರೆದು ತಂಟೆ ತೆಗೆಯುತ್ತಿರುವ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ವೇಳೆ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡನ ದಾಳಿ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.