ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮೌನ ಮುರಿದಿದ್ದು, ಸಾರ್ವಜನಿಕ ಹಣವನ್ನು ಲೂಟಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿ ಆರ್ಥಿಕ ಅಪರಾಧಗಳ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ವ್ಯವಸ್ಥೆ ಸಾರ್ವಜನಿಕರ ಹಣವನ್ನು ಲೂಟಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ನೀತಿ ಹಾಗೂ ನಿಯಮಗಳನ್ನು ರೂಪಿಸುವವರು ತಮ್ಮ ಕೆಲಸಗಳನ್ನು ಶ್ರದ್ಧೆಯಿಂದ ಮಾಡಬೇಕು ಎಂದು ಇದೇ ವೇಳೆ ಪ್ರಧಾನಿ ಮೋದಿ ಕರೆ ನೀಡಿದ್ದು, ಮೇಲ್ವಿಚಾರಣೆ ನಡೆಸುವ ಅಧಿಕಾರಿಗಳು ಇದನ್ನು ಮತ್ತಷ್ಟು ವಿಶೇಷವಾಗಿ ಪಾಲಿಸಬೇಕೆಂದು ಮೋದಿ ಹೇಳಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ನೀರವ್ ಮೋದಿ 11 ಸಾವಿರ ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.