ಯೋಗಿ ಆದಿತ್ಯನಾಥ್ 
ದೇಶ

ಧಾರ್ಮಿಕ ಸ್ಥಳಗಳನ್ನು ವಿಶ್ವದರ್ಜೆ ಪ್ರವಾಸೋದ್ಯಮ ಕೇಂದ್ರಗಳನ್ನಾಗಿಸಲು ಪ್ರಯತ್ನ: ಯೋಗಿ ಆದಿತ್ಯನಾಥ್

ರಾಜ್ಯದ ಧಾರ್ಮಿಕ ಸ್ಥಳಗಳನ್ನ ವಿಶ್ವದರ್ಜೆಯ ಪ್ರವಾಸಿ ಸ್ಥಳಗಳನ್ನಾಗಿ ಅಭಿವೃದ್ದಿ ಪಡಿಸಲು ಯತ್ನಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ...

ಮಥುರಾ: ರಾಜ್ಯದ ಧಾರ್ಮಿಕ ಸ್ಥಳಗಳನ್ನ ವಿಶ್ವದರ್ಜೆಯ ಪ್ರವಾಸಿ ಸ್ಥಳಗಳನ್ನಾಗಿ ಅಭಿವೃದ್ದಿ ಪಡಿಸಲು ಯತ್ನಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಕೃಷ್ಣ ಜನ್ಮಭೂಮಿ ಮಥರಾಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ . ಈ ಸ್ಥಳಕ್ಕೆ ಭೇಟಿ ನೀಡಲು ಅವಕಾಶ ಸಿಕ್ಕಿದೆ ಹಾಗೂ ಧಾರ್ಮಿಕ ಸ್ಥಳಗಳನ್ನು ಉನ್ನತ ದರ್ಜೆಗೇರಿಸಲು ನಾನು ಪ್ರಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಈದ್ ಆಲ್ ಫಿತರ್ ಆಚರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯೋಗಿ ಆದಿತ್ಯನಾಥ್, ಭಾರತ ಜಾತ್ಯತೀತ ದೇಶ, ಹೀಗಾಗಿ ರಾಜ್ಯದಲ್ಲಿ ಆಚರಿಸುವುದನ್ನು ತಾವು ತಡೆಯುವುದಿಲ್ಲ ಎಂದು ಹೇಳಿದ್ದಾರೆ.
ಕಳೆದ 11 ತಿಂಗಳಲ್ಲಿ ತಮ್ಮ ರಾಜ್ಯದಲ್ಲಿ  ಈದ್ ಉಲ್ ಫಿತರ್ ಅಥವಾ ಕ್ರಿಸ್ ಮಸ್ ಆಚರಿಸುವುದನ್ನು ತಡೆದಿಲ್ಲ, ನಾನು ಹಿಂದು,  ದೇಶದಲ್ಲಿ  ವಾಸವಿರುವ ಪ್ರತಿಯೊಬ್ಬರು ತಮ್ಮ ಧಾರ್ಮಿಕ ಆಚರಣೆ ನಡೆಸುವ ಹಕ್ಕಿದೆ, ನನ್ನ ಸಂಸ್ಕೃತಿ  ಬಗ್ಗೆ ನನಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ.
ಇನ್ನೂ ಧಾರ್ಮಿಕ ಸ್ಥಳಗಳಿಗೆ ಅಗತ್ಯವಾದ ಎಲ್ಲಾ ಸೌಲಭ್ಯ ಹಾಗೂ ಭದ್ರತೆ ಒದಗಿಸಲಾಗುವುದು ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ