ಗೋವಾ: ಸಿಎಂ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲು 
ದೇಶ

ಗೋವಾ: ಸಿಎಂ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲು

ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆ ನೋವಿನ ಕಾರಣ ಅವರು ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಣಜಿ(ಗೋವಾ): ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆ ನೋವಿನ ಕಾರಣ ಅವರು ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ಅವರು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾದರು
ಅರವತ್ತೆರಡು ವರ್ಷದ ಪರಿಕ್ಕರ್ ಇತ್ತೀಚೆಗಷ್ಟೇ ಅನಾರೋಗ್ಯದ ಕಾರಣ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಆ ಬಳಿಕ ಅವರು ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ವೇಳೆ ಹಾಜರಾಗಿದ್ದು ಅವರ ಸಹೋದ್ಯೋಗಿಗಳ ಅಚ್ಚರಿಗೂ ಕಾರಣವಾಗಿತ್ತು.
ಇದಕ್ಕೂ ಮುನ್ನ ಫೆ.15ರಂದು ಹೊಟ್ಟೆ ನೋವು ಹಾಗೂ ಆಹಾರ ಸಮಸ್ಯೆ ಕಾರಣಕ್ಕಾಗಿ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ಸಂದರ್ಭದಲ್ಲಿ ಅವರು ಮೇದೋಜೀರಕ ಗ್ರಂಥಿ ಸಮಸ್ಯೆಗಾಗಿ ಚಿಕಿತ್ಸೆ ಹೊಂದಿದ್ದರೆಂದು ಅವರ ಕಛೇರಿ ಮೂಲಗಳು ವರದಿ ನೀಡಿದ್ದವು.ಬಜೆಟ್ ಅಧಿವೇಶನದ ಬಳಿಕ ತಮ್ಮ ಆರೋಗ್ಯದ ಕುರಿತಂತೆ ಪ್ರಶ್ನಿಸಿದ್ದಾಗಲೂ ಪರಿಕ್ಕರ್ "ನನಗೆ ಅಂತಹಾ ಯಾವ ದೊಡ್ಡ ಆರೋಗ್ಯ ಸಮಸ್ಯೆ ಇಲ್ಲ, ನಾನು ಚೆನ್ನಾಗಿದ್ದೇನೆ" ಎಂದು ಭರವಸೆಯಿಂದ ನುಡಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT