ಚೀನಾ 
ದೇಶ

ಉಗ್ರರ ಆರ್ಥಿಕತೆಗೆ ಕಡಿವಾಣ: ಪಾಕ್ ಪರ ನಿಂತು ಮುಖಭಂಗ ಎದುರಿಸಲು ಚೀನಾ ಸಿದ್ಧವಿರಲಿಲ್ಲ-ವರದಿ

ಭಯೋತ್ಪಾದಕರಿಗೆ ಆರ್ಥಿಕ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಫ್ಎಟಿಎಫ್ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿರುವ ರಾಷ್ಟ್ರಗಳ ಪಟ್ಟಿಗೆ

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಫ್ಎಟಿಎಫ್ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿರುವ ರಾಷ್ಟ್ರಗಳ ಪಟ್ಟಿಗೆ ಸೇರಿಸಿದ್ದಕ್ಕೆ ಕೊನೆ ಕ್ಷಣದಲ್ಲಿ ಟರ್ಕಿ ಹೊರತುಪಡಿಸಿ ಚೀನಾ ಸೇರಿದಂತೆ ಉಳಿದೆಲ್ಲಾ ದೇಶಗಳೂ ಬೆಂಬಲ ವ್ಯಕ್ತಪಡಿಸಿದ್ದವು. 
ಅಮೆರಿಕ ಪ್ರಸ್ತಾವನೆಗೆ ಪ್ರಾರಂಭದಲ್ಲಿ ಚೀನಾ, ಟರ್ಕಿ, ಸೌದಿ, ಗಲ್ಫ್ ದೇಶಗಳು ವಿರೋಧ ವ್ಯಕ್ತಪಡಿಸಿದ್ದವು. ಆದರೆ ಕೊನೆ ಕ್ಷಣದಲ್ಲಿ ತನ್ನ ಪರಮಾಪ್ತ ರಾಷ್ಟ್ರ ಪಾಕಿಸ್ತಾನಕ್ಕೆ ಚೀನಾ ಕೈಕೊಟ್ಟಿತ್ತು. ಚೀನಾ ಪಾಕಿಸ್ತಾನವನ್ನು ಬೆಂಬಲಿಸದೇ ಇರುವುದರ ಹಿಂದಿನ ಕಾರಣ ಈಗ ಬಹಿರಂಗಗೊಂಡಿದ್ದು, ಪಾಕಿಸ್ತಾನವನ್ನು ಬೆಂಬಲಿಸುವ ಮೂಲಕ ಚೀನಾ ಮುಖಭಂಗ ಎದುರಿಸಲು ಸಿದ್ಧವಿರಲಿಲ್ಲ ಎಂಬ ಅಂಶವನ್ನು ಪಾಕಿಸ್ತಾನದ ಪತ್ರಿಕೆಯೇ ವಿಶ್ಲೇಷಿಸಿದೆ. 
ಪ್ರಾರಂಭದಲ್ಲಿ ಪಾಕಿಸ್ತಾನ ಚೀನಾದ ಬೆಂಬಲ ಸಿಗುತ್ತದೆ ಎಂಬ ಭರವಸೆ ಹೊಂದಿತ್ತು. ಅಮೆರಿಕಾಗೆ ವಿರುದ್ಧ ನಿಲ್ಲಲು ಚೀನಾದ ಬೆಂಬಲ ಅತ್ಯಂತ ಸಹಕಾರಿಯಾಗಿತ್ತು, ಚೀನಾ ಬೆಂಬಲದ ವಿಶ್ವಾಸದಿಂದಲೇ ಪಾಕ್ ವಿದೇಶಾಂಗ ಸಚಿವರೂ ಸಹ ಟ್ವೀಟ್ ಮೂಲಕ ಮಿತ್ರ ರಾಷ್ಟ್ರಗಳಿಗೆ ಧನ್ಯವಾದ ತಿಳಿಸಿದ್ದರು. ಆದರೆ ನಿರ್ಣಾಯಕ ಘಟ್ಟದಲ್ಲಿ ಚೀನಾ ಪಾಕ್ ಗೆ ಕೈಕೊಟ್ಟಿದ್ದು, ಭಯೋತ್ಪಾದಕರಿಗೆ ಆರ್ಥಿಕ ನೆರವು ಕಲ್ಪಿಸುತ್ತಿರುವ ರಾಷ್ಟ್ರಗಳ ಪಟ್ಟಿಗೆ ಪಾಕ್ ಸೇರ್ಪಡೆಗೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?